ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಎಂದು ತೀರ್ಮಾನವಾಗಿದೆ: ಬೊಮ್ಮಾಯಿ

0
A pro-development budget by a developed India
Spread the love

ಬೆಂಗಳೂರು: ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಎಂದು ತೀರ್ಮಾನವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬಿಎಸ್‌ವೈಯವರನ್ನು ಭೇಟಿ ಮಾಡಿದ ಬಳಿಕ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಸಹಜವಾಗಿ ಭೇಟಿ ಮಾಡುತ್ತೇವೆ. ಚುನಾವಣೆಯ ಬಗ್ಗೆ ಬಂದು ಮಾತನಾಡು ಎಂದಿದ್ದರು. ಅವರೊಂದಿಗೆ ಮಾತನಾಡಿದ್ದೇನೆ.

Advertisement

ಶಿಗ್ಗಾಂವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು. ಚುನಾವಣೆಗೆ ಏನೇನು ತಯಾರಿ ಮಾಡಿದ್ದೇವೆ ಎನ್ನುವ ಕುರಿತು ಕೇಳಿದರು. ಮಾಡಿಕೊಂಡಿರುವ ಎಲ್ಲ ಸಿದ್ಧತೆಗಳ ಕುರಿತು ತಿಳಿಸಿದ್ದೇನೆ. ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆಯಾಗಿದೆ. ಅಂತಿಮವಾಗಿ ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಎಂದು ತೀರ್ಮಾನವಾಗಿದೆ.

ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುವುದಕ್ಕೆ ಪ್ರಯತ್ನ ಮಾಡೋಣ ಎಂದಿದ್ದಾರೆ. ದೆಹಲಿಗೆ ಅ.19ರ ನಂತರ ಹೋಗುತ್ತೇನೆ ಎಂದು ಹೇಳಿದರು. ಚನ್ನಪಟ್ಟಣ ಟಿಕೆಟ್ ಕುರಿತು ಮಾತನಾಡಿದ ಅವರು ಚನ್ನಪಟ್ಟಣದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ನಮ್ಮ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here