HomeGadag Newsಕಾರ್ಮಿಕರಿಲ್ಲದ ಜಗತ್ತನ್ನು ಊಹಿಸಲು ಸಾಧ್ಯವಿಲ್ಲ

ಕಾರ್ಮಿಕರಿಲ್ಲದ ಜಗತ್ತನ್ನು ಊಹಿಸಲು ಸಾಧ್ಯವಿಲ್ಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ನರಗುಂದ: ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿ ಆ ದೇಶದ ಕಾರ್ಮಿಕರನ್ನು ಅವಲಂಬಿಸಿದೆ. ಕಾರ್ಮಿಕರಿಲ್ಲದ ಜಗತ್ತನ್ನು ಊಹಿಸಲು ಸಾಧ್ಯವಿಲ್ಲ. ಇಂತಹ ಶ್ರಮಜೀವಿಗಳ ಕೆಲಸದ ಕೊಡುಗೆಯನ್ನು ಗೌರವಿಸುವ ಹಾಗೂ ಅವರ ಕಷ್ಟಗಳನ್ನು ಸ್ಮರಿಸಲು ಪ್ರತಿವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕರ ದಿನ ಆಚರಿಸಲಾಗುತ್ತದೆ ಎಂದು ಪಿಡಿಒ ಮಂಜುನಾಥ ಗಣಿ ಹೇಳಿದರು.

ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ದುಡಿಯೋಣ ಬಾ, ಸ್ತ್ರೀ ಚೇತನ ಅಭಿಯಾನ ಹಾಗೂ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದ ಜನರಿಗೆ ನಿರಂತರ ಕೆಲಸ ಕೊಡುವ ಇಲಾಖೆ ಆರ್‌ಡಿಪಿಆರ್ ಇಲಾಖೆ. ಅದು ನರೇಗಾ ಯೋಜನೆಯಾಗಿದ್ದು, ಕೊಟ್ಯಾಂತರ ಅಕುಶಲ ಕೂಲಿ ಕಾರ್ಮಿಕರು ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ನರೇಗಾ ಯೋಜನೆಯಡಿ ಮೇ 1ರಿಂದ ದುಡಿಯೋಣ ಬಾ ಅಭಿಯಾನ ಪ್ರಾರಂಭಿಸಲಾಗುತ್ತಿದೆ. ಮಹಿಳೆಯರ ಅಭ್ಯುದಯಕ್ಕಾಗಿ ಸ್ತ್ರೀ ಚೇತನ ಅಭಿಯಾನ ಕೈಗೊಂಡಿದ್ದು, ಅಕುಶಲ ಕಾರ್ಮಿಕರು ಇದರ ಸದುಪಯೋಗ ಪಡೆಯಬೇಕು. ಕೊಣ್ಣೂರ ಗ್ರಾಮದಲ್ಲಿ ನರೇಗಾ ಯೋಜನೆಯಡಿ 100 ದಿನಗಳ ಕೆಲಸ ನೀಡಲಾಗುತ್ತದೆ. ಈಗಾಗಲೇ 13 ದಿನಗಳ ಕೆಲಸ ನೀಡಲಾಗಿದೆ. ಮಳೆ ಬರುವವರೆಗೂ ನಿರಂತರ ಕೆಲಸ ನೀಡಲಾಗುತ್ತದೆ. ಕೂಲಿಕಾರರು ಗ್ರಾ.ಪಂ ಸಹಕಾರದೊಂದಿಗೆ ಕೆಲಸ ಪಡೆಯಬೇಕು ಎಂದರು.

ವಿಶ್ವ ಕಾರ್ಮಿಕ ದಿನದ ಅಂಗವಾಗಿ ಮಹಿಳಾ ಕೂಲಿ ಕಾರ್ಮಿಕರು ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಕಾರ್ಮಿಕ ದಿನದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಐಇಸಿ ಸಂಯೋಜಕರು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಗ್ರಾಮ ಕಾಯಕ ಮಿತ್ರರು, ಕಾಯಕ ಬಂಧುಗಳು, ನರೇಗಾ ಹಾಗೂ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

 

ಕಾರ್ಮಿಕರು ಹಗಲು-ರಾತ್ರಿ, ಬಿಸಿಲು-ಮಳೆ ಎನ್ನದೆ ಸಮರ್ಪಣಾ ಭಾವದಿಂದ ಕಠಿಣ ಶ್ರಮವಹಿಸಿ ದುಡಿಯುತ್ತಾರೆ. ಹೀಗೆ ದುಡಿಯುವ ಕಾರ್ಮಿಕ ವರ್ಗದವರ ಕೆಲಸ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಿಡಿಒ ಮಂಜುನಾಥ ಗಣಿ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!