ತುಮಕೂರು: ಮಹಾರಾಷ್ಟ್ರದವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಪ್ರತಿ ಸಲ ಗಡಿಭಾಗದಲ್ಲಿ ಭಾಷಾ ಆಧಾರದ ಮೇಲೆ ಆಗುವ ಗಲಾಟೆ ವೇಳೆ ಬಹಳ ಎಚ್ಚರಿಕೆಯಿಂದ ಮಹಾರಾಷ್ಟ್ರದವರು ನಡೆದುಕೊಳ್ಳಬೇಕು.
ಅದನ್ನು ಹೆಚ್ಚು ಬೆಳೆಯಲು ಬಿಡಬಾರದು. ನಮ್ಮಲ್ಲಿ ಅಂತಹ ಪ್ರಕರಣಗಳು ಆದಾಗ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮಹಾರಾಷ್ಟ್ರದವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಗೃಹ ಸಚಿವರು ಎಚ್ಚರಿಸಿದರು.
ಇನ್ನೂ ಮಂಗಳೂರು ಜೈಲಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಡ್ರಗ್ಸ್ ಪೂರೈಕೆ ಮಾಡಿದವರು ಯಾರು? ಹೇಗೆ ಪೂರೈಕೆಯಾಗಿದೆ ಎಂಬುದನ್ನು ತನಿಖೆ ನಡೆಸಲಿದ್ದಾರೆ.
ಅಕ್ರಮ ಚಟುವಟಿಕೆಗಳು ಕಂಡುಬಂದಾಗಲೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ. ಮಂಗಳೂರು ಹೊಸ ಜೈಲು ಕಟ್ಟಡ ನಿರ್ಮಾಣ ನಡೆಯುತ್ತಿದೆ. ಪೂರ್ಣಗೊಂಡ ಬಳಿಕ ಸ್ಥಳಾಂತರಿಸಲಾಗುವುದು ಎಂದು ಹೇಳಿದರು.