HomePolitics Newsಸರ್ಕಾರ ಮಾಡುವ ತಪ್ಪುಗಳನ್ನು ಜನರ ಮುಂದಿಡುವುದು ನಮ್ಮ ಕರ್ತವ್ಯ: ಆರ್.ಅಶೋಕ್

ಸರ್ಕಾರ ಮಾಡುವ ತಪ್ಪುಗಳನ್ನು ಜನರ ಮುಂದಿಡುವುದು ನಮ್ಮ ಕರ್ತವ್ಯ: ಆರ್.ಅಶೋಕ್

For Dai;y Updates Join Our whatsapp Group

ಮಂಡ್ಯ: ವಿಪಕ್ಷವಾಗಿ ನಾವು ಹೋರಾಟ ಮಾಡುತ್ತಿದ್ದೇವೆ, ಕಾಂಗ್ರೆಸ್ ಪಕ್ಷ ಆಡಳಿತ ಪಕ್ಷವಾಗಿ ಹಾರಾಟ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತು ಪುಸ್ತಕ ಬಿಡುಗಡೆ ಮಾಡಿದ ಅವರು,

ವಿಪಕ್ಷವಾಗಿ ನಾವು ಹೋರಾಟ ಮಾಡುತ್ತಿದ್ದೇವೆ, ಕಾಂಗ್ರೆಸ್ ಪಕ್ಷ ಆಡಳಿತ ಪಕ್ಷವಾಗಿ ಹಾರಾಟ ಮಾಡುತ್ತಿದೆ. ಮಂತ್ರಿಗಳಿಗೆವಹಿಸಿದ ಸಭೆಗಳನ್ನು ಮಾಡಿ, ನಾವು ಬಿಜೆಪಿ ಭ್ರಷ್ಟಾಚಾರಗಳನ್ನು ಬಯಲಿಗೆ ತರುತ್ತೇವೆ. ಕೇಂದ್ರ ನೀಡುವ ಅನುದಾನದಲ್ಲಿ ತಾರತಮ್ಯವಾಗಿದೆ ಎಂದು, ಆ ಬಗ್ಗೆ ಸಮಾವೇಶ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ಸಿನವರು ನಾಟಕ ಆಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪಾದಯಾತ್ರೆಯ ಅಂತಿಮ ಘಟ್ಟಕ್ಕೆ ತಲುಪಿದ್ದೇವೆ. ಇಂದು ಸಂಜೆ ಮೈಸೂರು ಗಡಿಭಾಗ ತಲುಪಿ ಶನಿವಾರ ಬೆಳಿಗ್ಗೆ ಆರೇಳು ಕಿಮೀ ಪಾದಯಾತ್ರೆಯ ಬಳಿಕ ಮೈಸೂರಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಜನರು ನಮ್ಮನ್ನು ವಿಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಸರ್ಕಾರ ಮಾಡುವ ತಪ್ಪುಗಳನ್ನು ಜನರ ಮುಂದಿಡುವುದು, ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ. ಅವರ ಭ್ರಷ್ಟಾಚಾರ, ಅವ್ಯವಹಾರ, ಸ್ವಜನ ಪಕ್ಷಪಾತ- ಇವೆಲ್ಲವನ್ನೂ ತಿಳಿಸುವುದು, ಹೋರಾಟ ಮಾಡುವುದು ನಮ್ಮ ಹಕ್ಕು ಎಂದು ಅವರು ಪ್ರತಿಪಾದಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img