ಬೆಂಗಳೂರು:- ರಾಜ್ಯ ಸರ್ಕಾರದ ಜನವಿರೋಧಿ ಕಾರ್ಯಕ್ರಮಗಳ ವಿರುದ್ಧ ನಮ್ಮ ಹೋರಾಟ ನಿರಂತರ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
Advertisement
ನಗರದ ಫ್ರೀಡಂ ಪಾರ್ಕಿನಲ್ಲಿ ಬಿಜೆಪಿಯ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಸರ್ಕಾರದ ತಪ್ಪು ನೀತಿಗಳ ವಿರುದ್ಧ ಹೋರಾಟ ಮಾಡುವುದು ನಮ್ಮ ಕರ್ತವ್ಯ. ಮುಖ್ಯಮಂತ್ರಿಗಳ ಮನೆಯ ಬಳಿ ಹೋದಾಗ ನಮ್ಮನ್ನು ಬಂಧಿಸಬೇಕಿತ್ತು. ಮುಂಚೆಯೇ ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದು ಸರಿಯಲ್ಲ ಎಂದರು.
ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಮುಖ್ಯಮಂತ್ರಿಗಳ ಮನೆಯ ಹತ್ತಿರ ಬಂದಾಗ ಅರೆಸ್ಟ್ ಮಾಡುತ್ತಿದ್ದೆವು. ಇವತ್ತು ಮುಂಜಾಗ್ರತಾ ಕ್ರಮವೆಂದು ಮುಂಚಿತವಾಗಿಯೇ ಬಂಧಿಸಿದ್ದು ಸರಿಯಲ್ಲ. ರಾಜ್ಯದ ಉದ್ದಗಲಕ್ಕೆ ನಮ್ಮ ಹೋರಾಟ ಮುಂದುವರೆಸಲಿದ್ದೇವೆ. ಜನವಿರೋಧಿ ಕಾರ್ಯಕ್ರಮಗಳನ್ನು ಹಿಂದಕ್ಕೆ ಪಡೆಯುವವರೆಗೆ ನಮ್ಮ ಹೋರಾಟ ನಿರಂತರ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.