ಬೆಳಗಾವಿ: ಸಾವಿಗೀಡಾದ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಜವಾಬ್ದಾರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಪರಿಷತ್ತಿನ ಕಲಾಪದಲ್ಲಿ ಬಾಣಂತಿಯರ ಸಾವುಗಳ ಕುರಿತು ನಡೆದ ಚರ್ಚೆ ಬಗ್ಗೆ ಮಾತನಾಡಿದ ಅವರು,
Advertisement
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಾವಿಗೀಡಾದ ಬಾಣಂತಿಯರ ಪ್ರಕರಣ ಅಷ್ಟೇ ಅಲ್ಲ. ರಾಜ್ಯದಲ್ಲಿ ನಡೆದ ಪ್ರತಿಯೊಂದು ತಾಯಿ ಮಗುವಿನ ಸಾವು ಪ್ರಕರಣ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೇನೆ.
ಎಷ್ಟೋ ಪ್ರಕರಣಗಳು ಬೆಳಕಿಗೆ ಬರುವುದಿಲ್ಲ. ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಎಲ್ಲ ಪ್ರಕರಣಗಳನ್ನು ಪರಿಶೀಲನೆ ನಡೆಸಿ ವರದಿ ನೀಡುವಂತೆ ಹೇಳಿದ್ದೇನೆ. ಸಾವಿಗೀಡಾದ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಜವಾಬ್ದಾರಿ. ಲೋಪದೋಷಗಳನ್ನು ಸರಿಪಡಿಸಿಕೊಂಡು ನಾವು ಮುಂದೆ ಸಾಗಬೇಕಿದೆ ಎಂದು ಹೇಳಿದ್ದಾರೆ.