HomeKarnataka Newsನಮ್ಮಲ್ಲೂ ಭ್ರಷ್ಟಾಚಾರ ನಡೆಯುತ್ತಿರೋದು ನಿಜ, ತಡೆಯೋದು ಸುಲಭವಲ್ಲ: ಕೃಷ್ಣ ಬೈರೇಗೌಡ!

ನಮ್ಮಲ್ಲೂ ಭ್ರಷ್ಟಾಚಾರ ನಡೆಯುತ್ತಿರೋದು ನಿಜ, ತಡೆಯೋದು ಸುಲಭವಲ್ಲ: ಕೃಷ್ಣ ಬೈರೇಗೌಡ!

For Dai;y Updates Join Our whatsapp Group

Spread the love

ಬೆಳಗಾವಿ :- ನಮ್ಮಲ್ಲೂ ಭ್ರಷ್ಟಾಚಾರ ನಡೆಯುತ್ತಿರೋದು ನಿಜ, ತಡೆಯೋದು ಸುಲಭವಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ವಿಧಾನಪರಿಷತ್‌ನಲ್ಲಿ ಬುಧವಾರ ಮಾತನಾಡಿದ ಅವರು, ಕಂದಾಯ ಮತ್ತು ಭೂಮಾಪನ ಇಲಾಖೆಯಲ್ಲಿ ಕೆಳ ಹಂತದಲ್ಲಿ ಭ್ರಷ್ಟಾಚಾರ ನಡೆಯುಯತ್ತಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.

ಕೆಳಮಟ್ಟದಲ್ಲಿ ಭ್ರಷ್ಟಾಚಾರ ತಡೆಯುವುದು ಸುಲಭವಲ್ಲ. ಇದು ಹಿಂದೆಯೂ ಇತ್ತು ಮತ್ತು ಈಗಲೂ ಮುಂದುವರಿಯುತ್ತಿದೆ. ಆದರೆ ನಾವು ಅದನ್ನು ತಡೆಯಲು ಪ್ರಯತ್ನಿಸುತ್ತಿದ್ದೇವೆ ಎಂದರು.

ರೈತರ ಪೋಡಿ ಪರಿಷ್ಕರಣೆ ವಿಳಂಬದ ಕುರಿತು ಕಾಂಗ್ರೆಸ್‌ ಎಂಎಲ್‌ಸಿ ರಾಮೋಜಿಗೌಡ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸುವ ಸಂದರ್ಭದಲ್ಲಿ ಸಚಿವರು ಭ್ರಷ್ಟಾಚಾರ ತಡೆಯುವ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿದರು.

ಇ-ಖಾತಾ ಅಳವಡಿಕೆ ಕುರಿತು ಬಿಜೆಪಿ ಎಂಎಲ್ಸಿ ಶಶಿಲ್ ನಮೋಶಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೃಷ್ಣಬೈರೇಗೌಡ, ನಾನು ಅಕ್ರಮಗಳನ್ನು ತಡೆಯಲು ಬಂದಿದ್ದೇನೆಯೇ ಹೊರತು ಭ್ರಷ್ಟಾಚಾರವನ್ನು ಬೆಂಬಲಿಸಲು ಅಲ್ಲ. ನಕಲಿ ದಾಖಲೆಗಳನ್ನು ತಯಾರಿಸಿ ನೋಂದಣಿಗೆ 40 ರಿಂದ 50 ಸಾವಿರ ರೂ. ವಿಧಿಸುವುದನ್ನು ಬೆಂಬಲಿಸಬೇಕೆಂದು ನೀವು ಬಯಸುತ್ತೀರಾ ಎಂದು ಮರು ಪ್ರಶ್ನೆ ಮಾಡಿದ್ದಾರೆ.

ಇ-ಖಾತಾವನ್ನು ವಿರೋಧಿಸುವ ಸದನದ ಸದಸ್ಯರು ಸರ್ಕಾರವು ಅಕ್ರಮವಾಗಿ ಆದಾಯವನ್ನು ಗಳಿಸಬೇಕೆಂದು ಬಯಸುತ್ತಾರೆಯೇ ಎಂದು ಸಚಿವರು ಪ್ರಶ್ನಿಸಿದ್ದಾರೆ. ಇ-ಖಾತಾ ಜಾರಿಗೆ ಬಂದಾಗ ಆರಂಭದಲ್ಲಿ ಅನಾನುಕೂಲತೆಗಳಿದ್ದವು ಎಂಬ ಅಂಶವನ್ನು ಕೃಷ್ಣ ಬೈರೇಗೌಡ ಒಪ್ಪಿಕೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!