ಬೆಳಗಾವಿ;- ಜಿಲ್ಲೆಯಲ್ಲಿ ಬೇರೆ ಬೇರೆ ಗುಂಪುಗಳಿರುವುದು ಸತ್ಯ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಈಗಲೂ ಬೇರೆ, ಬೇರೆ ಗುಂಪುಗಳಿವೆ, ಇಲ್ಲ ಎನ್ನುವುದಿಲ್ಲ. ಲಕ್ಷ್ಮೀ ಹೆಬ್ಬಾಳ್ಕರ್ ಗುಂಪು ಮತ್ತು ನಮ್ಮ ಗುಂಪು ಬೇರೆ, ಬೇರೆ ಇರಬಹುದು. ಆದರೆ, ಚುನಾವಣೆ ಬಂದಾಗ ನಾವೆಲ್ಲರೂ ಒಂದೇ ಎನ್ನುವ ಮೂಲಕ ಜಿಲ್ಲಾ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇರುವುದನ್ನು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಬಿಜೆಪಿ, ಜೆಡಿಎಸ್ ಗಳಲ್ಲಿ ಗುಂಪಿರುವ ಹಾಗೆ ಸ್ವಾಭಾವಿಕವಾಗಿ ನಮ್ಮಲ್ಲೂ ಗುಂಪಿದೆ. ಇಲ್ಲಾ ಅಂತೇನಿಲ್ಲ. ಜಿಲ್ಲೆಯಲ್ಲಿ ನಮ್ಮದು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರದು ಬೇರೆ, ಬೇರೆ ಗುಂಪು ಇದ್ದರೂ ಚುನಾವಣೆ ಬಂದಾಗ ಒಂದಾಗುತ್ತೇವೆ ಎಂದು ಹೇಳಿದರು.ಜಿಲ್ಲೆಯಲ್ಲಿ ಈಗಲೂ ತಾವು ಸ್ಟ್ರಾಂಗಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ನಾವು ಸ್ಟ್ರಾಂಗೂ ಇರಲ್ಲಾ, ವೀಕೂ ಇರಲ್ಲಾ. ಪಕ್ಷ ಅಧಿಕಾರಕ್ಕೆ ಬರಲು ನನ್ನ ಜತೆ ಸಾವಿರಾರು, ಲಕ್ಷಾಂತರ ಕಾರ್ಯಕರ್ತರ ಪಾತ್ರವಿದೆ’ ಎಂದರು.