ಸಾಫ್ಟ್‌ʼವೇರ್ ಉದ್ಯೋಗಿಗಳು ಆನ್‌ʼಲೈನ್ ಗೇಮ್‌ʼಗಳ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ: ಡಾ.ಜಿ.ಪರಮೇಶ್ವರ್‌

0
Spread the love

ಬೆಳಗಾವಿ: ಸಾಫ್ಟ್‌ʼವೇರ್ ಉದ್ಯೋಗಿಗಳು ಆನ್‌ʼಲೈನ್ ಗೇಮ್‌ʼಗಳ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಕಲಾಪದಲ್ಲಿ ಮಾತನಾಡಿದ ಅವರು, ಹೆಚ್ಚಿನ ಪ್ರಮಾಣದಲ್ಲಿ ಯುವ ಪೀಳಿಗೆ ಆನ್‌ಲೈನ್ ಗೇಮ್‌ಗಳ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಆನ್‌ಲೈನ್ ಗೇಮ್ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಇದರ ತಡೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿ ಮಾಡಬೇಕಿದೆ.

Advertisement

ಬೆಂಗಳೂರು ನಗರದಲ್ಲಿ 5 ಹಾಗೂ ವಿಜಯನಗರದಲ್ಲಿ ಒಬ್ಬರು ಆನ್‌ಲೈನ್ ಬೆಟ್ಟಿಂಗ್ ಆಟದ ದಂಧೆಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಫ್ಟ್‌ವೇರ್ ಉದ್ಯೋಗಿಗಳು ಇದರ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ ಎಂದು ತಿಳಿಸಿದರು. ಆನ್‌ಲೈನ್‌ ಬೆಟ್ಟಿಂಗ್‌ ಗೇಮ್‌ಗಳ ಸಂಸ್ಥೆಗಳಿಗೆ ಸರ್ಕಾರ ಪರವಾನಗಿ ನೀಡುವುದಿಲ್ಲ. ಆದರೂ, ಇವುಗಳಿಗೆ ಕಡಿವಾಣ ಹಾಕಲು ಸೂಕ್ತ ಕಾನೂನು ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಆದರೆ, ನಿರ್ಬಂಧ ವಿಧಿಸಲು ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ನೀಡಿದೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here