ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಅವರಿಗೆ ಐಟಿ ಅಧಿಕಾರಿಗಳು ಬೆಳ್ಳಬೆಳಗ್ಗೆ ಶಾಕ್ ನೀಡಿದ್ದಾರೆ. ದಿಲ್ ರಾಜು ಅವರ ಮನೆ, ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಐಟಿ ಅಧಿಕಾರಿಗಳು ಏಕಕಾಲಕ್ಕೆ 8 ಸ್ಥಳಗಳಲ್ಲಿ ಒಟ್ಟು 55 ತಂಡಗಳೊಂದಿಗೆ ತಪಾಸಣೆ ನಡೆಸುತ್ತಿದ್ದಾರೆ. ದಿಲ್ ರಾಜು, ಅವರ ಪುತ್ರಿ, ಸಹೋದರ ಹಾಗೂ ಸಂಬಂಧಿಕರ ಮನೆಗಳಲ್ಲೂ ಈ ತಪಾಸಣೆ ನಡೆಸಲಾಗುತ್ತಿದೆ.
ದಿಲ್ ರಾಜು ಸಿನಿಮಾ ನಿರ್ಮಾಣದ ಜೊತೆಗೆ FDS ನ ಅಧ್ಯಕ್ಷರು ಆಗಿದ್ದಾರೆ. ಇತ್ತೀಚೆಗಷ್ಟೇ ದಿಲ್ ರಾಜು ನಿರ್ಮಾಣದ ಗೇಮ್ ಚೇಂಜರ್ ಮತ್ತು ಸಂಕ್ರಾಂತಿಯ ಚಿತ್ರಗಳು ಬಿಡುಗಡೆಯಾಗಿವೆ. ಈ ಪೈಕಿ ಗೇಮ್ ಚೇಂಜರ್ ದೊಡ್ಡ ಬಜೆಟ್ ಸಿನಿಮಾ. ಕಲೆಕ್ಷನ್ ಸರಾಸರಿ ಆಗಿದೆ. ಅದೇ ಹೊತ್ತಿಗೆ ಕಡಿಮೆ ಬಜೆಟ್ ನಲ್ಲಿ ತಯಾರಾದ ಸಂಕ್ರಾಂತಿಕಿ ವಸ್ತುನ್ನಾಂ. ಆದರೆ ಕಲೆಕ್ಷನ್ ಗಳು ಭರ್ಜರಿಯಾಗುತ್ತಿವೆ. ಹೀಗಿರುವಾಗ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಿಲ್ ರಾಜು ಜೊತೆ ‘ಪುಷ್ಪ 2’ ಚಿತ್ರ ನಿರ್ಮಾಣ ಸಂಸ್ಥೆ ಮೇಲೂ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನವೀನ್, ಸಿಇಒ ಚರ್ರಿ ಕಚೇರಿ ಹಾಗೂ ಆಪ್ತರ ಕಚೇರಿಗಳಲ್ಲೂ ಐಟಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಆಗಿದೆ. ವೆಂಕಟೇಶ್ವರ ಪ್ರೊಡಕ್ಷನ್ ಸಂಸ್ಥೆಯಲ್ಲೂ ಐಟಿ ತಂಡದವರು ದಾಖಲೆ ಪರಿಶೀಲನೆ ಮಾಡಿದ್ದಾರೆ.