ಬಾಗಲಕೋಟೆ:- ಬೆಳಗಾವಿಯಲ್ಲಿ ಸಿ.ಟಿ.ರವಿ ಮುಗಿಸಬೇಕೆಂಬ ಉದ್ದೇಶವಿತ್ತು ಅನಿಸುತ್ತೆ ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಅವರನ್ನ ಫೇಕ್ಎನ್ಕೌಂಟರ್ ಮಾಡುವ ವಿಚಾರ ಪೊಲೀಸರಿಗೆ ಇತ್ತು ಅನಿಸುತ್ತೆ. ನಾವು ಏನು ಮಾಡಬೇಕು ಅದನ್ನ ನಾವು ಮಾಡುತ್ತೇವೆ. ಈ ಬಗ್ಗೆ ನಾವು ಸುಮ್ಮನೆ ಕೂರುವುದಿಲ್ಲ, ಹೋರಾಟ ಮಾಡುತ್ತೇವೆ ಎಂದರು.
ಅವಕಾಶ ಸಿಕ್ಕರೆ ಸಿ.ಟಿ.ರವಿ ಮುಗಿಸಬೇಕೆಂಬ ಉದ್ದೇಶವಿತ್ತು ಅನಿಸುತ್ತೆ. ಆದರೆ, ಸರಿಯಾದ ಅವಕಾಶ ಸಿಕ್ಕಿಲ್ಲ. ನಮ್ಮ ಎಂಎಲ್ಸಿ ಕೇಶವಪ್ರಸಾದ್ ಕೂಡ ಅವರ ಹಿಂದೆ ಇದ್ದರು. ನಮಗೆ ಸಿ.ಟಿ.ರವಿ ಅವರ ಲೈವ್ ಲೊಕೇಶನ್ ಸಿಗುತ್ತಿತ್ತು. ಕೆಲವು ಮಾಧ್ಯಮದವರು ಕೂಡ ಬೆನ್ನುಹತ್ತಿದ್ರು, ಧನ್ಯವಾದಗಳು ಎಂದಿದ್ದಾರೆ.
ಅಂತಹ ರಾತ್ರಿಯೊಳಗೆ ಬೆಳಗಾವಿ ಮಾಧ್ಯಮದವರು ಬೆನ್ನು ಹತ್ತಿದ್ದರು. ವಿಡಿಯೋ ಮಾಡುತ್ತಿದ್ದರು ಲೊಕೇಶನ್ ಹಾಕುತ್ತಿದ್ದರು. ಇಲ್ಲದೆ ಹೋಗಿದ್ದರೆ ಸಿಟಿ ಅವರನ್ನ ಫೇಕ್ಎನ್ಕೌಂಟರ್ ಮಾಡುವಂತ ವಿಚಾರ ಅಲ್ಲಿನ ಪೊಲೀಸ್ ತಂಡಕ್ಕೆ ಇತ್ತು ಅಂತ ನನಗೆ ಅನಿಸುತ್ತದೆ ಎಂದು ಹೇಳಿದ್ದಾರೆ.