ಯಾದಗಿರಿ: ರಾಜಕಾರಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು ಎಂದು ಶಾಸಕ ಜಿಟಿ ದೇವೇಗೌಡ ಹೇಳಿಕೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಏನೂ ತಪ್ಪು ಮಾಡಿಲ್ಲ ಅಂತಾ ಹೇಳುತ್ತಾರೆ. ಏನು ತಪ್ಪು ಮಾಡಿಲ್ಲ ಅಂತೀರಾ, ರಾಜಕೀಯ ಮಾತಾಡಲು ವೇದಿಕೆನಾ ಎಂದು ಪ್ರಶ್ನಿಸಿದ್ದಾರೆ. ರಾಜಕಾರಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು ಎಂದು ಕಿಡಿಕಾರಿದ್ದಾರೆ.
Advertisement
ನಾನು ಯಾರದೇ ಒಬ್ಬರ ಹೆಸರನ್ನು ಇಲ್ಲಿ ಪ್ರಸ್ತಾಪಿಸಲು ಹೋಗಲ್ಲ. ನಾಡಹಬ್ಬ ದಸರಾ ವೇದಿಕೆ ರಾಜಕೀಯಕ್ಕೆ ಬಳಕೆ ಆಗಿರೋದು ತಪ್ಪು. ಶಾಸಕ ಜಿಟಿ ದೇವೇಗೌಡ ಆಗಿರಬಹುದು ಅಥವಾ ಇನ್ನೊಬ್ಬರು ಆಗಿರಬಹುದು ಅದು ತಪ್ಪು. ಮುಂದಿನ ವರ್ಷ ಯಾವುದೇ ಸರ್ಕಾರ ಆಡಳಿತದಲ್ಲಿ ಇರಲಿ, ರಾಜಕಾರಣಿಗಳಿಗೆ ಅದು ವೇದಿಕೆ ಆಗಬಾರದು ಎಂದು ಹೇಳಿದ್ದಾರೆ.