ನಿಮ್ಮ ಬಾಯಿಗೆ ನೀವೇ ಬೀಗ ಹಾಕಿಕೊಂಡರೆ ಒಳ್ಳೆಯದು: ಯತ್ನಾಳ್ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ

0
Spread the love

ದಾವಣಗೆರೆ: ನಿಮ್ಮ ಬಾಯಿಗೆ ನೀವೇ ಬೀಗ ಹಾಕಿಕೊಂಡರೆ ಒಳ್ಳೆಯದು ಎಂದು ಯತ್ನಾಳ್ ವಿರುದ್ಧ ಕಾಂಗ್ರೆಸ್‍ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರು ಬಸವಣ್ಣನವರ ಹೆಸರು ಬಳಸಿ ನೀಡಿದ್ದ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.

Advertisement

ವಿಶ್ವಗುರು ಬಸವಣ್ಣನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರೆ ಹುಷಾರ್. ನಿಮ್ಮ ಬಾಯಿಗೆ ನೀವೇ ಬೀಗ ಹಾಕಿಕೊಂಡರೆ ಒಳ್ಳೆಯದು. ಇಲ್ಲದೇ ಹೋದರೆ ನಾವೇ ಬೀಗ ಹಾಕುತ್ತೇವೆ ಎಂದು ಕಿಡಿಕಾರಿದ್ದಾರೆ.

ಬಸವಣ್ಣ ಹೊಳೆಗೆ ಹಾರಿ ಸತ್ತರು ಎಂದು ಹೇಳುತ್ತೀರಿ. ಇನ್ನೊಂದೆಡೆ ವೀರಶೈವ ಮಹಾಸಭಾ ಎಂದರೆ ಭೀಮಣ್ಣ ಖಂಡ್ರೆ, ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಎನ್ನುತ್ತೀರಿ. ಮಹಾಸಭಾ ಎಂದರೆ ಏನೆಂದುಕೊಂಡಿದ್ದೀರಿ? ನಿಮ್ಮ ಇಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here