ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,
ಮಸೀದಿ ಎದುರಿಗೆ ಬಂದ ಮೆರವಣಿಗೆಯ ಮೇಲೆ ಕಲ್ಲು ಹಾಗೂ ಚಪ್ಪಲಿ ಎಸೆಯಲಾಗಿದೆ ಎಂದು ಆರೋಪಿಸಿದರು. ಇದು ಇಡೀ ಹಿಂದುಗಳ ಮೇಲೆ ನಡೆದ ದೌರ್ಜನ್ಯ. ಇಂತಹ ಕೃತ್ಯವನ್ನು ನಾನು ಖಂಡಿಸುತ್ತೇನೆ. ಇದು ದೇಶದ್ರೋಹಿ ಕೆಲಸ ಎಂದು ಹೇಳಿದರು.
ಈ ಘಟನೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿದ ಮುತಾಲಿಕ್, ಜಲದಲು ಎಸ್ಪಿ ಅವರ ಮೇಲೂ ಕಲ್ಲು ಬಿದ್ದಿದೆ. ಬೇರೆ ಯಾರ ಮೇಲಾದರೂ ಬಿದ್ದಿದ್ದರೆ ಘಟನೆ ನಡೆದೇ ಇಲ್ಲ ಎಂದು ಸರ್ಕಾರ ಹೇಳುತ್ತಿದ್ದೀತು ಎಂದು ಟೀಕಿಸಿದರು.
ಇಂತಹ ಘಟನೆಗಳಿಗೆ ಕಾರಣವಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಮಾಜದಲ್ಲಿ ಅಶಾಂತಿ ಉಂಟುಮಾಡುವವರನ್ನು ಕಟ್ಟುನಿಟ್ಟಾಗಿ ಎದುರಿಸಬೇಕು ಎಂದರು.



