ಮೈಸೂರು: ಹೋಲಿಕೆ ಮಾಡಿದ ವಿಚಾರದಲ್ಲಿ ಕ್ಷಮೆ ಕೇಳೋದು ಬಿಡೋದು ಯತೀಂದ್ರ ವಿವೇಚನೆಗೆ ಬಿಟ್ಟ ವಿಚಾರ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅಧಿಕಾರ ಇರುವುದು ಕೆಲಸ ಮಾಡಲು ಅಷ್ಟೇ, ಹೋಲಿಕೆ ಮಾಡಲು ಅಲ್ಲ. ಸಂಸದನಾಗಿ ನನ್ನ ಕೆಲಸ ನಾನು ಮಾಡುತ್ತಿದ್ದೇನೆ,
ನನ್ನ ಚೌಕಟ್ಟಿನೊಳಗೆ ಕೆಲಸ ಮಾಡುತ್ತೇನೆ. ಯಾರ ಜೊತೆಯೂ ಹೋಲಿಕೆ ಮಾಡಲು ಹೋಗುವುದಿಲ್ಲ ಎಂದರು. ಇನ್ನೂ ಕ್ಷಮೆ ಕೇಳುವುದು, ಬಿಡುವುದು ಅವರಿಗೇ ಬಿಟ್ಟಿದ್ದು. ಜನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಅವರೇ ಉತ್ತರ ನೀಡುತ್ತಾರೆ ಎಂದರು.
ಇನ್ನೂ ಮಹಾರಾಷ್ಟ್ರದ ಪೊಲೀಸರು ಸ್ಥಳೀಯ ಪೊಲೀಸರ ಸಹಾಯದಿಂದ ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ ಮಾಡಿದ್ದಾರೆ. ಮೈಸೂರಿನ ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಡ್ರಗ್ಸ್ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಕೆಲಸ ಮಾಡಬೇಕಾಗಿದೆ.
ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಡ್ರಗ್ಸ್ ಮಾರಾಟವಾಗುತ್ತಿದೆ ಎಂಬ ದೂರು ಕೇಳಿಬರುತ್ತಿದ್ದು, ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಡ್ರಗ್ಸ್ ಜಾಲ ಪತ್ತೆ ಮಾಡಬೇಕಾಗಿದೆ ಎಂದು ಹೇಳಿದರು.