ಬೆಳಗಾವಿ:- ಬಾಣಂತಿಯರ ಕಿಲ್ಲರ್ IV ಗ್ಲುಕೋಸ್ ಬೆಳಗಾವಿಯಲ್ಲಿ ಪತ್ತೆ ಆಗಿದ್ದು, ಉಗ್ರಾಣದ ಮೇಲೆ ಲೋಕಾ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.
Advertisement
ಬೆಳಗಾವಿ ಜಿಲ್ಲಾ ಬಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಔಷಧ ಉಗ್ರಾಣದಲ್ಲಿ ಆರ್ಎಲ್ಎಸ್ ಐವಿ ಗ್ಲುಕೋಸ್ ಪತ್ತೆ ಆಗಿದೆ. ಬೆಳಗಾವಿ ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ 8 ಅಧಿಕಾರಿಗಳಿಂದ ಉಗ್ರಾಣದಲ್ಲಿ ಪರಿಶೀಲನೆ ಮಾಡಲಾಗಿದ್ದು, ಈ ವೇಳೆ ಪಿಬಿಪಿ ಸಂಸ್ಥೆ ಸರಬರಾಜು ಮಾಡಿರುವ ಐವಿ ಗ್ಲುಕೋಸ್ ಬಾಕ್ಸ್ಗಳು ಪತ್ತೆ ಆಗಿವೆ.
ಬೆಳಗಾವಿ ಜಿಲ್ಲಾದ್ಯಂತ ಕಳೆದ ಏಪ್ರಿಲ್ ತಿಂಗಳಿಂದಲೇ RLS ಐವಿ ಗ್ಲುಕೋಸ್ ಪೂರೈಕೆಯಾಗಿದ್ದು, ಎಲ್ಲೆಲ್ಲಿ ಪೂರೈಕೆಯಾಗಿದೆ ಎಂಬ ಬಗ್ಗೆ ಉಗ್ರಾಣ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ.
ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಪೂರೈಕೆ ಮಾಡಿರುವ ಬಗ್ಗೆ ಮಾಹಿತಿ ಇದೆ.