ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಜ. ತೋಂಟದಾರ್ಯ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ನಿಮಿತ್ತ ಶಾಲಾ ಆಡಳಿತ ಮಂಡಳಿಯವರು ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ರಂಗೋಲಿ ಹಾಕುವ ಮೂಲಕ ಹಬ್ಬದ ವಾತಾವರಣ ನಿರ್ಮಿಸಿದ್ದರು.
Advertisement
ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ, ಆರತಿ ಮಾಡಿ, ಸಿಹಿ ಹಂಚಿ ಹಬ್ಬದ ವಾತಾವರಣದಲ್ಲಿ ಮಕ್ಕಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಎನ್.ಸಿ. ಮುಕ್ಕಣ್ಣವರ, ನಾಗರಾಜ ಗಾಳಿ, ಕೆ.ಎಮ್. ಗೌಡರ, ಗುರುರಾಜ ಅಗಸಿಮನಿ, ನಾಗರಾಜ ತಳವಾರ ಮುಂತಾದವರು ಉಪಸ್ಥಿತರಿದ್ದರು.