ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಪ್ ಧನ್ಕರ್!

0
Spread the love

ನವದೆಹಲಿ:- ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ರಾಜೀನಾಮೆ ಭಾರತದ ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿದೆ ಎಂದು ಜಗದೀಪ್ ಧನ್ಕರ್ ಹೇಳಿದ್ದಾರೆ. ಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯವನ್ನು ಉಲ್ಲೇಖಿಸಿರುವ ಜಗದೀಪ್ ಧನ್ಕರ್ ಅವರು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ.

ಪತ್ರದಲ್ಲಿ ಏನಿದೆ?

ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಜಗದೀಪ್ ಧನ್ಕರ್, ರಾಷ್ಟ್ರಪತಿಗಳ ಬೆಂಬಲ ಮತ್ತು ತಮ್ಮ ಅಧಿಕಾರಾವಧಿಯಲ್ಲಿ ಅವರು ಹಂಚಿಕೊಂಡ ಸೌಹಾರ್ದಯುತ ಕಾರ್ಯ ಸಂಬಂಧಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಸಂಪುಟಕ್ಕೆ ಅವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಪ್ರಧಾನಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು. ನನ್ನ ಅಧಿಕಾರದ ಅವಧಿಯಲ್ಲಿ ಬಹಳಷ್ಟು ಕಲಿತಿದ್ದೇನೆ ಎಂದು ಅವರು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here