ಬೆಂಗಳೂರು: ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡುತ್ತಿದ್ದ ಜೈಲು ವಾರ್ಡನ್ ನನನು ಅರೆಸ್ಟ್ ಮಾಡಲಾಗಿದೆ. ಕಲ್ಲಪ್ಪ ಬಂಧಿತ ಆರೋಪಿಯಾಗಿದ್ದು, ಮಾಜಿ ಸೈನಿಕರ ಕೋಟಾದಲ್ಲಿ 2018ರಲ್ಲಿ ಕಾರಾಗೃಹ ಇಲಾಖೆಗೆ ಸೇರಿದ್ದ ಆರೋಪಿ, ಕೆಲ ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದರು.
ಕೈದಿಗಳಿಗೆ ತಂಬಾಕು, ಮಾದಕ ವಸ್ತು ಪೂರೈಸುತ್ತಿದ್ದನು. ಸೆ.7ರ ಸಂಜೆ ಜೈಲಿನ ಡ್ಯೂಟಿಗೆ ಬರುವ ವೇಳೆ ಸಿಐಎಸ್ಎಫ್ ಸಿಬ್ಬಂದಿಗಳಿಂದ ಪ್ರವೇಶ ದ್ವಾರದ ಬಳಿ ಕಲ್ಲಪ್ಪನ ಪರಿಶೀಲನೆ ಮಾಡಲಾಗಿದ್ದು, ಈ ವೇಳೆ ಅವರ ಜೇಬಿನಲ್ಲಿ ತಂಬಾಕು ಮತ್ತು ಆಶಿಶ್ ಆಯಿಲ್ ಪತ್ತೆ ಆಗಿದೆ.
ಸದ್ಯ ಪೊಲೀಸರು ಕಲ್ಲಪ್ಪನನ್ನ ವಿಚಾರಣೆ ಮಾಡುತ್ತಿದ್ದಾರೆ. ಯಾರಿಂದ ಮಾದಕವಸ್ತು ಖರೀದಿಸಿದ್ದ, ಯಾರಿಗೆ ಪೂರೈಸುತ್ತಿದ್ದ ಎಂದು ತನಿಖೆ ಮಾಡಲಾಗುತ್ತಿದೆ. ಬಂಧಿತನಿಂದ ಖಾಕಿ ಪ್ಯಾಂಟ್ನಲ್ಲಿ ಸೆಲ್ಲೋಟೇಪ್ ಸುತ್ತಿ ಇಟ್ಟಿದ್ದ 100 ಗ್ರಾಂ ಆಶಿಶ್ ಆಯಿಲ್ ಜಪ್ತಿ ಮಾಡಲಾಗಿದೆ.