HomeKarnataka Newsಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ: ಪತಿ ಬಿಡುಗಡೆಗೆ ಹೋಮ ಹವನ ಮಾಡಿಸುತ್ತಿರುವ ಪತ್ನಿ...

ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ: ಪತಿ ಬಿಡುಗಡೆಗೆ ಹೋಮ ಹವನ ಮಾಡಿಸುತ್ತಿರುವ ಪತ್ನಿ ಲಕ್ಷ್ಮಿ ಅರುಣಾ

For Dai;y Updates Join Our whatsapp Group

Spread the love

ಉಡುಪಿ: ಓಬಳಾಪುರಂ ಅಕ್ರಮ ಗಣಿಗಾರಿಕೆ  ಮತ್ತು ಗಡಿ ಒತ್ತುವರಿ ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಯನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದ್ದು, 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿತ್ತು. ಹೀಗಾಗಿ ಗಾಲಿ ಜನಾರ್ಧನ್ ರೆಡ್ಡಿ ಬಿಡುಗಡೆಗಾಗಿ ಪತ್ನಿ ಲಕ್ಷ್ಮಿ ಅರುಣಾ ಅವರು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸುತ್ತಿದ್ದಾರೆ.

ಅದಲ್ಲದೆ ಪ್ರತಿಷ್ಠಿತ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಸುಬ್ರಮಣ್ಯ ಸ್ವಾಮಿ ದೇವಸ್ಥಾನ, ಬ್ರಹ್ಮಲಿಂಗೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ ಹವನಗಳನ್ನು ಮಾಡಿ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಭಕ್ತರ ಜೊತೆಗೆ ಸರದಿ ಸಾಲಿನಲ್ಲಿ ನಿಂತು ದೇವಸ್ಥಾನದಲ್ಲಿ  ಪ್ರವೇಶ ಪಡೆದು, ದೇವರ ದರ್ಶನ ಪಡೆದು, ಕಷ್ಟ ನಿವಾರಣೆ ಮಾಡುವಂತೆ ಪ್ರಾರ್ಥಿಸಿದ್ದಾರೆ.

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ನ್ಯಾಯಾಲಯ ದೋಷಿಯೆಂದು ಘೋಷಿಸಿ, ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಮೇ 06, 2025 ರಂದು ಪ್ರಕಟಗೊಂಡಿತ್ತು. ಪ್ರಕರಣವು ಬಳ್ಳಾರಿ ಜಿಲ್ಲೆಯ ಓಬಳಾಪುರಂ ಗಣಿಗಾರಿಕೆಯಲ್ಲಿ ನಡೆದಿದ್ದ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದ್ದು, ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಮತ್ತು ಗಣಿಗಾರಿಕೆ ನಿಯಮಗಳ ಉಲ್ಲಂಘನೆಯ ಆರೋಪಗಳು ಹೊರಿಸಲಾಗಿತ್ತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!