ಹುಬ್ಬಳ್ಳಿ: ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳ ಊಟದಲ್ಲಿ ವಿಷ ಪ್ರಶಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಅರವಿಂದ್ ಬೆಲ್ಲದ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶ್ರೀಗಳ ಆರೋಗ್ಯ ಹದಗೆಟ್ಟಿದೆ. ಅವರಿಗೆ ಫುಡ್ ಪಾಯಿಸನ್ ಆಗಿದೆ ಅಂತ ಗೊತ್ತಿತ್ತು. ಆದ್ರೆ ಇದರ ಹಿಂದೆ ಬೇರೆ ಷಡ್ಯಂತ್ರ ಅಡಗಿದೆ ಎಂದು ಆರೋಪ ಮಾಡಿದ್ದಾರೆ.
ಮಠದ ಹೊರಗಡೆ ಇಬ್ಬರು ಮುಸ್ಲಿಂ ಸಮಾಜದ ಹುಡುಗರು ಇದ್ದು, ಆ ಇಬ್ಬರೂ ಮಠಕ್ಕೆ ಯಾರು ಬರ್ತಾರೆ ಯಾರು ಹೋಗ್ತಾರೆ ಅಂತ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ವಿಡಿಯೋ ಸಹ ಮಾಡಿಕೊಳ್ಳುತ್ತಿದ್ದಾರೆ ಅಂತ ಭಕ್ತರು ನನಗೆ ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.
ಅದೇ ಮುಸ್ಲಿಂ ಯುವಕರು ಮಠದ ಅಡುಗೆ ಮನೆಗೆ ಹೋಗಿದ್ದರು. ಈ ಬಗ್ಗೆ ಸ್ಥಳೀಯ ಭಕ್ತರು ಯುವಕರನ್ನು ವಿಚಾರಣೆ ಮಾಡಿದ್ದಾರೆ. ಆ ಯುವಕರು ಅಡುಗೆ ಮನೆಗೆ ಹೋಗಿ ಬಂದ ಕೆಲವೆ ಹೊತ್ತಿನಲ್ಲಿ ಶ್ರೀಗಳ ಆರೋಗ್ಯ ಹದಗೆಟ್ಟಿದೆ. ಈ ಬಗ್ಗೆ ಸ್ವತಃ ಶ್ರೀಗಳೇ ನನ್ನ ಮುಂದೆ ಹೇಳಿಕೊಂಡಿದ್ದಾರೆ ಎಂದರು.