ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಪ್ರಕರಣಕ್ಕೆ ಸಂಬಂಧಿಸಿ ವಶಪಡಿಸಿಕೊಂಡ ಚಿನ್ನ ಮತ್ತು ವಜ್ರದ ಆಭರಣಗಳು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ತಮಿಳು ನಾಡು ಸರ್ಕಾರಕ್ಕೆ ಹಿಂದಿರುಗಿಸಲು ಅನುಮತಿ ನೀಡಿದೆ.
ಹೌದು ಕಳೆದ ವರ್ಷ ಮಾರ್ಚ್ 6, 7ರಂದು ಒಡವೆ ಹಸ್ತಾಂತರಿಸಬೇಕಿತ್ತು. ಆದರೆ ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆ ಎಂದು ಜಯಲಲಿತಾ ವಾರಸುದಾರೆ ಜೆ.ದೀಪಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಸುಪ್ರೀಂಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜೆ.ದೀಪಾ ಅರ್ಜಿಗೆ ಎಸ್‌ಪಿಪಿ ಕಿರಣ್ ಜವಳಿ ಆಕ್ಷೇಪಣೆ ಸಲ್ಲಿಸಿದ್ದರು. ತಮಿಳುನಾಡು ಸರ್ಕಾರದ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದಿಸಿದ್ದರು. ವಿಚಾರಣೆ ನಡೆಸಿ ಜೆ.ದೀಪಾ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ನ್ಯಾ.ವಿ.ಶ್ರೀಶಾನಂದ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.