HomeDharwadಡಾ. ಬಾಬು ಜಗಜೀವನ ರಾಂ ಜಯಂತಿ ಆಚರಣೆ

ಡಾ. ಬಾಬು ಜಗಜೀವನ ರಾಂ ಜಯಂತಿ ಆಚರಣೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ, ನಮಿಸಿದರು.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಗೋಪಾಲ ಎಂ.ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭಾ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮಾಜ ಗಣ್ಯರು, ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.

ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಅವರ ಜಯಂತಿ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಹಾನಗರ ಪಾಲಿಕೆ ಹತ್ತಿರದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮತ್ತು ಕಲಾಭವನ ಆವರಣದಲ್ಲಿರುವ ಶ್ರೀ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತರಾದ ರವೀಶ್ ಸಿ.ಆರ್, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜೆಡಿ ಪಿ.ಶುಭಾ ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img