ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಮಗೇರಿ ಗ್ರಾಮದ ಜಿ.ಎಫ್. ಉಪನಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ಜಯಶ್ರೀ ಹಿರೇಮಠ ಧಾರವಾಡದ ಚೇತನ ಫೌಂಡೇಶನ್ ಕೊಡಮಾಡುವ ಉತ್ತಮ ಶಿಕ್ಷಕಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಧಾರವಾಡದ ಚಂದ್ರಶೇಖರ ಮಾಡಲಗೇರಿ ನೇತೃತ್ವದ ಚೇತನ ಫೌಂಡೇಶನ್ ಕರ್ನಾಟಕ ವಿಶ್ವವಿದ್ಯಾಲಯದ ಕನಕ ವಿದ್ಯಾಪೀಠದಲ್ಲಿ ಭಾನುವಾರ ನಡೆದ ನುಡಿ ಸಡಗರ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದ ವಿಶೇಷ ಸೇವೆ ಪರಿಗಣಿಸಿ ರಾಮಗೇರಿ ಗ್ರಾಮದ ಜಿ.ಎಫ್. ಉಪನಾಳ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಶ್ರೀ ಹಿರೇಮಠ, ಲಕ್ಷ್ಮೇಶ್ವರದ ಸರ್ಕಾರಿ ಪ್ರಾ.ಶಾಲೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಶಿಕ್ಷಕ ಬಸವರಾಜ ದನದಮನಿ ಅವರಿಗೆ ಉತ್ತಮ ಶಿಕ್ಷಕ ಪುರಸ್ಕಾರ ನೀಡಿ ಗೌರವಿಸಲಾಯಿತು.



