ಕಾಲ್ತುಳಿತದ ಸ್ಥಳದಲ್ಲಿ ಸಾಕ್ಷ್ಯಗಳನ್ನು ನಾಶಮಾಡಲು ಜೆಸಿಬಿಗಳನ್ನು ಬಳಸಲಾಗಿದೆ: ಅಖಿಲೇಶ್ ಯಾದವ್

0
Spread the love

ನವದೆಹಲಿ: ಕಾಲ್ತುಳಿತದ ಸ್ಥಳದಲ್ಲಿ ಸಾಕ್ಷ್ಯಗಳನ್ನು ನಾಶಮಾಡಲು ಜೆಸಿಬಿಗಳನ್ನು ಬಳಸಲಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಖಿಲೇಶ್ ಗಂಭೀರ ಆರೋಪ ಮಾಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಸಾವುನೋವುಗಳ ಬಗ್ಗೆ ಪಾರದರ್ಶಕತೆ ತರಬೇಕೆಂದು ಒತ್ತಾಯಿಸಿದರು.

Advertisement

ಸಾವುಗಳು, ಗಾಯಗೊಂಡವರ ಚಿಕಿತ್ಸೆ ಮತ್ತು ಕಾರ್ಯಕ್ರಮಕ್ಕೆ ಮಾಡಲಾದ ವ್ಯವಸ್ಥೆಗಳ ಬಗ್ಗೆ ನಿಖರವಾದ ಅಂಕಿಅಂಶಗಳನ್ನು ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು. ಮಹಾ ಕುಂಭ ದುರಂತಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸತ್ಯವನ್ನು ಮರೆಮಾಚಿದವರಿಗೆ ಶಿಕ್ಷೆ ವಿಧಿಸಬೇಕು. ಯಾವುದೇ ಅಪರಾಧವಿಲ್ಲದಿದ್ದರೆ ಅಂಕಿ ಅಂಶಗಳನ್ನು ಏಕೆ ಮರೆಮಾಡಲಾಗಿದೆ ಎಂದು ಇದೇ ವೇಳೆ ಪ್ರಶ್ನಿಸಿದರು.

ಕಾಲ್ತುಳಿತದ ನಂತರ ನೂರಾರು ಜನರು ಕಾಣೆಯಾಗಿದ್ದಾರೆ. ಘಟನೆಯ ನಂತರ 15,000 ಜನರು ತಮ್ಮ ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ ಹೇಳಿದ್ದಾರೆ ಈ ಬಗ್ಗೆ ಸರ್ಕಾರ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ. ಮಹಾ ಕುಂಭಮೇಳದಲ್ಲಿ 30 ಜನರು ಸಾವನ್ನಪ್ಪಿದ ಕಾಲ್ತುಳಿತದ ಬಗ್ಗೆ ತಕ್ಷಣ ಚರ್ಚಿಸಬೇಕೆಂದು ಒತ್ತಾಯಿಸಿದರು.


Spread the love

LEAVE A REPLY

Please enter your comment!
Please enter your name here