ಜನ ಕಲ್ಯಾಣಕ್ಕೆ ಜೆಡಿಎಸ್ ಕೌಂಟರ್: ಮಂಡ್ಯದಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ!

0
Spread the love

ಮಂಡ್ಯ:- ಮಾಜಿ ಪ್ರಧಾನಿ ದೇವೇಗೌಡರ ತವರು ಹಾಸನದಲ್ಲಿ ಶಕ್ತಿ ಪ್ರದರ್ಶನ ನಡೆಸಿದ ‘ಕೈ’ ಪಡೆಗೆ ಕೌಂಟರ್ ಕೊಡಲು ದಳಪತಿಗಳು ಸಜ್ಜಾಗಿದ್ದಾರೆ.

Advertisement

ಕಾಂಗ್ರೆಸ್ ಸಮಾವೇಶದ ಬೆನ್ನಲ್ಲೇ ಎಚ್ಚೆತ್ತ ದಳಪತಿಗಳು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅಭಿನಂದನಾ ಕಾರ್ಯಕ್ರಮದ ಹೆಸರಿನಲ್ಲಿ ಡಿಸೆಂಬರ್ 15ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ಆಯೋಜಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಡಿಸೆಂಬರ್ 15ರಂದು ಮಂಡ್ಯದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಿ ಸಮಾವೇಶ ನಡೆಸಲು ಜೆಡಿಎಸ್ ನಾಯಕರು ಚಿಂತನೆ ನಡೆಸಿದ್ದಾರೆ.

ಬೃಹತ್ ಸಮಾವೇಶದ ಮೂಲಕ ಚನ್ನಪಟ್ಟಣ ಸೋಲಿನ ಹತಾಶೆಯಲ್ಲಿರುವ ಕಾರ್ಯಕರ್ತರನ್ನು ಹುರಿದುಂಬಿಸುವ ಉದ್ದೇಶ ಜೆಡಿಎಸ್​​ನದ್ದು ಎನ್ನಲಾಗಿದೆ. ಬಿಜೆಪಿಯ ನಾಯಕರು, ಕಾರ್ಯಕರ್ತರನ್ನೂ ಒಳಗೊಂಡಂತೆ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆ ಮೂಲಕ ಹಳೇ ಮೈಸೂರು ಭಾಗದಲ್ಲಿ ಮೈತ್ರಿ ಪ್ರಾಬಲ್ಯ ಕುಗ್ಗದಂತೆ ನೋಡಿಕೊಳ್ಳುವುದು ಜೆಡಿಎಸ್ ಉದ್ದೇಶ ಎನ್ನಲಾಗಿದೆ.

ಮಾಜಿ ಸಚಿವ ಸಿಎಸ್ ಪುಟ್ಟರಾಜು ಈಗಾಗಲೇ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here