ಕಲಬುರ್ಗಿ:- ಜೆಡಿಎಸ್ ನವರು ತಮ್ಮ ಪಕ್ಷವನ್ನೇ ಮಾರಾಟಕ್ಕಿಟ್ಟಿದ್ದಾರೆ ಎಂದು ಸಚಿವ ಪ್ರಿಯಾಂಕ ಖರ್ಗೆ ಲೇವಡಿ ಮಾಡಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್‌ನವರು ತಮ್ಮ ಪಕ್ಷವನ್ನೇ ಮಾರಾಟಕ್ಕೆ ಇಟ್ಟಿದ್ದಾರೆ. ಅಂತದ್ರಲ್ಲಿ ಅವರು ಸಿಎಂ ಲೀಸ್ ಪಿರಿಡ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.
ಈಗಾಗಲೇ ಜೆಡಿಎಸ್ ಫ್ಲಾಟ್ ನಲ್ಲಿ ಬಿಜೆಪಿಯವರು ಬಹುಮಹಡಿ ಕಟ್ಟಡವನ್ನೇ ಕಟ್ಟಿದ್ದಾರೆ. ಕುಮಾರಸ್ವಾಮಿ ಹಿಂದೆ ಸಹ ರಾಜ್ಯ ರಾಜಕಾರಣದಲ್ಲಿದ್ರು ಆಗಲೂ ಏನೂ ಆಗಿಲ್ಲ. ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.



