ಅಸ್ತಿತ್ವ ಉಳಿಸಿಕೊಳ್ಳಲು ಸರ್ಕಾರದ ವಿರುದ್ಧ ಜೆಡಿಎಸ್ ಹೋರಾಟ: DCM ಡಿಕೆಶಿ ವ್ಯಂಗ್ಯ!

0
Spread the love

ಬೆಂಗಳೂರು :- ಜೆಡಿಎಸ್ ಪಕ್ಷವೂ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿರುವ ವಿಚಾರದ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಮಾಡಬಾರದು ಎಂದು ಹೇಳಲು ಸಾಧ್ಯವಿಲ್ಲ. ಜೆಡಿಎಸ್ ಪಕ್ಷದವರು ‘ಸಾಕಪ್ಪಾ ಸಾಕು ಬಿಜೆಪಿ ಸರ್ಕಾರ’ ಎಂದು ಹೋರಾಟ ಮಾಡಲು ಸಲಹೆ ನೀಡುತ್ತೇನೆ. ಅವರು ಸಿದ್ಧಾಂತವನ್ನು ಬಳಸಿಕೊಂಡಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ಅವರಿಗೆ ಅಭಿನಂದನೆಗಳು” ಎಂದು ತಿಳಿಸಿದರು.

ಕರಗ ಉತ್ಸವಕ್ಕೆ ಅನುದಾನ ನೀಡಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, “ನಮಗೆ ಯಾರು ಬಂದು ಅರ್ಜಿ ನೀಡಿದ್ದಾರೋ ಅವರಿಗೆ ನೆರವು ನೀಡಲಿದ್ದೇವೆ. ಇದಕ್ಕೆ ಬಜೆಟ್ ನಲ್ಲೂ ಅನುದಾನ ಮೀಸಲಿಡಲಾಗಿದೆ. ಅವರು 2-3 ಭಾಗಗಳಾಗಿರಬೇಕು. ಎಲ್ಲರೂ ಒಗ್ಗಟ್ಟಾಗಿ ಬಂದರೆ, ಕರಗ ಉತ್ಸವಕ್ಕೆ ಮೊದಲಿನಿಂದಲೂ ಯಾವ ರೀತಿ ನೆರವು ನೀಡುತ್ತಿದ್ದೆವೋ ಅದನ್ನೇ ನೀಡುತ್ತೇವೆ. ನಾವು ಅನುದಾನ ನೀಡದಿದ್ದರೆ ನಮಗೆ ಆಹ್ವಾನ ಯಾಕೆ ನೀಡಿದ್ದಾರೆ?”ಎಂದು ತಿಳಿಸಿದರು.

ಜಾತಿ ಗಣತಿ ವರದಿ ವಿಚಾರದಲ್ಲಿ ತಮ್ಮ ನಿಲುವೇನು ಎಂದು ಕೇಳಿದಾಗ, “ಜಾತಿ ಗಣತಿಯು ಜನಗಣತಿಯಲ್ಲ, ಅದು ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ. ನಮ್ಮ ಪಕ್ಷ ಸರ್ವರಿಗೂ ಸಮಬಾಳು, ಸಮಪಾಲು ಎಂಬ ನಿಲುವು ಹೊಂದಿದೆ. ಮುಖ್ಯಮಂತ್ರಿಗಳು ಹಾಗೂ ನಾನು ಇನ್ನು ವರದಿ ನೋಡಿಲ್ಲ. ನಾವು ಇದನ್ನು ಪರಿಶೀಲನೆ ಮಾಡುತ್ತೇವೆ. ಏನಾದರೂ ಹೆಚ್ಚು ಕಮ್ಮಿ ಇದ್ದರೆ ಎಲ್ಲರೂ ಚರ್ಚೆ ಮಾಡಿ ಅದನ್ನು ಸರಿಪಡಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.


Spread the love

LEAVE A REPLY

Please enter your comment!
Please enter your name here