ಬೆಂಗಳೂರು:- ಜೆಡಿಎಸ್ ಪಕ್ಷ ಮುಗಿಸಲು ಯಾರಿಂದಲೂ ಅಸಾಧ್ಯ ಎಂದು ಮಾಜಿ ಪ್ರಧಾನಿ HD ದೇವೇಗೌಡ ಹೇಳಿದ್ದಾರೆ.
ಜೆಡಿಎಸ್ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಎಂಬ ವದಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ.
ಕುಮಾರಸ್ವಾಮಿ ಅವರನ್ನು ಮುಗಿಸಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ. ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕುಮಾರಸ್ವಾಮಿ ಅವರನ್ನಾಗಲೀ, ಜೆಡಿಎಸ್ ಪಕ್ಷವನ್ನಾಗಲೀ ಮುಗಿಸಲು ಸಾಧ್ಯವೇ ಇಲ್ಲ. ಕುಮಾರಸ್ವಾಮಿ ಅವರ ಹಿಂದೆ ಕಾರ್ಯಕರ್ತರ ದೊಡ್ಡ ಪಡೆಯೇ ಇದೆ ಎಂದು ಮಾಜಿ ಪ್ರಧಾನಿಗಳು ಹೇಳಿದ್ದಾರೆ.
ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ತಾರೆ!
ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಅವರು 11 ಜೆಡಿಎಸ್ ಶಾಸಕರು ಸದ್ಯದಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂದು ಹೇಳಿ ರಾಜ್ಯ ರಾಜಕೀಯದಲ್ಲಿ ಧೂಳೆಬ್ಬಿಸಿದ್ದರು. ಅವರ ಈ ಹೇಳಿಕೆಯು ಜೆಡಿಎಸ್ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.
ಹೀಗಾಗಿ ಬಾನುವಾರ HD ಕುಮಾರಸ್ವಾಮಿ ಹಾಗೂ HD ದೇವೇಗೌಡ ಸಭೆ ನಡೆಸಿ, ಜೆಡಿಎಸ್ ಶಾಸಕರು ಮತ್ತು ಮುಖಂಡರಿಗೆ ಧೈರ್ಯ ತುಂಬವ ಪ್ರಯತ್ನ ಮಾಡಿದ್ದಾರೆ