ರಾಮನಗರ:- ಕೇಂದ್ರ ಬಜೆಟ್ ಬಗ್ಗೆ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ಈ ಸಂಬಂಧ ಮಾತನಾಡಿದ ಅವರು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರವರು ಮಂಡನೆ ಮಾಡಿರೋದು ಐತಿಹಾಸಿಕ ಬಜೆಟ್. ಮಧ್ಯಮ ವರ್ಗಕ್ಕೆ ಅನುಕೂಲ ಆಗುವಂತೆ ನಿರ್ಣಯ ಮಾಡಿದ್ದಾರೆ.
12 ಲಕ್ಷದ ವರೆಗೂ ತೆರಿಗೆ ವಿನಾಯಿತಿ ನೀಡಿರುವುದು ಖುಷಿಯ ವಿಚಾರ. ಮಧ್ಯಮ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗಿದೆ. ಪ್ರಧಾನ ಮಂತ್ರಿಗಳ ಕನಸಿನಂತೆ ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲಾಗಿದೆ ಎಂದರು.
ಚನ್ನಪಟ್ಟಣ ಗೊಂಬೆ ಉದ್ಯಮಕ್ಕೆ ಪ್ರೋತ್ಸಾಹ ನೀಡಿರುವುದು ಸ್ವಾಗತಾರ್ಹ. ಬಜೆಟ್ ಬಗ್ಗೆ ಪರ-ವಿರೋಧ ಚರ್ಚೆ ಸಹಜ. ಆದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜ್ಯಕ್ಕೆ ಅನುದಾನ ಬರುವ ನಿರೀಕ್ಷೆ ಇದೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ಉತ್ತಮ ಬಜೆಟ್ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು.