ಪುರಸಭೆ ಸದಸ್ಯ ಸ್ಥಾನಕ್ಕೆ ಜಿಡ್ಡಿಬಾಗಿಲ ರಾಜೀನಾಮೆ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ಪಟ್ಟಣದ 10ನೇ ವಾರ್ಡ್ ಗೆ ಬಿಜೆಪಿಯಿಂದ ಆಯ್ಕೆಯಾಗಿದ್ದ ಸಂಗಪ್ಪ ಜಿಡ್ಡಿಬಾಗಿಲ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

Advertisement

ಜಿಲ್ಲಾ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಅಧಿಕಾರಿ ಗಂಗಪ್ಪ ಎಂ.ರವರಿಗೆ ತಮ್ಮ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡಿರುವುದು ಬಹಿರಂಗಗೊಂಡಿದೆ.

ಈ ಕುರಿತು ಮಾತನಾಡಿದ ಸದಸ್ಯ ಸಂಗಪ್ಪ ಜಿಡ್ಡಿಬಾಗಿಲ, ಬಿಜೆಪಿ ಪಕ್ಷದಲ್ಲಿ ವಾತವರಣ ಸರಿಯಿಲ್ಲ. ಅಲ್ಲಿ ಉಸಿರುಗಟ್ಟುವ ವಾತವರಣ ನಿರ್ಮಾಣಗೊಂಡಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಪುರಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಇನ್ನು ಕೆಲ ದಿನಗಳಲ್ಲಿ ನೂರಾರು ಬೆಂಬಲಿಗರೊಂದಿಗೆ ರಾಜ್ಯ ಕಂಡ ಅಪ್ರತಿಮ ನಾಯಕರು, ರೋಣ ಮತಕ್ಷೇತ್ರದ ಶಾಸಕರಾದ ಜಿ.ಎಸ್. ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮೂಲಕ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here