HomeCrime Newsಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

For Dai;y Updates Join Our whatsapp Group

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ ಒಟ್ಟು ₹10 ಲಕ್ಷ ಪರಿಹಾರ ನೀಡಲಾಗಿದೆ.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹3 ಲಕ್ಷ ಹಾಗೂ ಚಿಕಿತ್ಸಾ ವೆಚ್ಚದ ರೂಪದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ₹7 ಲಕ್ಷ ಸೇರಿದಂತೆ ಒಟ್ಟು ₹10 ಲಕ್ಷವನ್ನು ಮೃತ ವಿದ್ಯಾರ್ಥಿನಿಯ ಪೋಷಕರಿಗೆ ನೀಡಲಾಗಿದೆ.

ಮೈಸೂರು ಜಿಲ್ಲೆಯ ನಂಜನಗೂಡು ಮೂಲದ 23 ವರ್ಷದ ಮಾನಸ, ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು.

ಕಳೆದ ಜುಲೈ 30ರಂದು ಜ್ಞಾನಭಾರತಿ ಕ್ಯಾಂಪಸ್‌ನ ಗಾಂಧಿ ಮಾರ್ಗದಲ್ಲಿರುವ ಕ್ಯಾಂಟೀನ್ ಸಮೀಪ ಮಾನಸ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಆಟೋರಿಕ್ಷಾ ಅವರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರವಾಗಿ ಗಾಯಗೊಂಡಿದ್ದ ಮಾನಸ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕಳೆದ ಗುರುವಾರ (ಆ.6) ಅವರು ಮೃತಪಟ್ಟಿದ್ದರು.

ಯುವ ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿರುವ ಸರ್ಕಾರ, ಸಂಕಷ್ಟಕ್ಕೆ ಸಿಲುಕಿರುವ ಅವರ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಪರಿಹಾರ ನೀಡಿದೆ. ವಿದ್ಯಾರ್ಥಿನಿಯ ಕುಟುಂಬಕ್ಕೆ ಸರ್ಕಾರ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದಿಂದ ಒಟ್ಟು ₹10 ಲಕ್ಷ ನೆರವು ದೊರೆತಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img