HomeEntertainment27 ಗ್ರಾಪಂಗಳಲ್ಲಿ ಜಾಬ್‌ಕಾರ್ಡ್ ಮೇಳ

27 ಗ್ರಾಪಂಗಳಲ್ಲಿ ಜಾಬ್‌ಕಾರ್ಡ್ ಮೇಳ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಬಿ ಜಿ ರಾಮ್ ಜಿ ಯೋಜನೆಯಡಿ ತಾಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲಿ ಜಾಬ್‌ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್.ಎಸ್. ಜನಗಿ ತಿಳಿಸಿದ್ದಾರೆ.

ಸೆಪ್ಟೆಂಬರ್ 15ರವರೆಗೆ ತಾಲೂಕಿನಾದ್ಯಂತ ಜಾಬ್‌ಕಾರ್ಡ್ ಮೇಳ ಹಾಗೂ ಮನೆ-ಮನೆ ಭೇಟಿ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳು ಕಡಿಮೆಯಾಗಿರುವ ಸಂದರ್ಭದಲ್ಲಿ ಸ್ಥಳೀಯ ಮಟ್ಟದಲ್ಲಿಯೇ ಉದ್ಯೋಗ ಕಲ್ಪಿಸುವುದು ಪ್ರಮುಖ ಆದ್ಯತೆಯಾಗಿದೆ. ವಿಬಿ ಜಿ ರಾಮ್ ಜಿ ಯೋಜನೆಯಡಿ ಅರ್ಹ ಗ್ರಾಮೀಣ ಕುಟುಂಬಗಳಿಗೆ ಲಭ್ಯವಿರುವ ವಿವಿಧ ಕಾಮಗಾರಿಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುವುದು ಎಂದರು.

ಜಾಬ್‌ಕಾರ್ಡ್ ಹೊಂದಿರುವವರು ಹಾಗೂ ಹೊಸದಾಗಿ ಜಾಬ್‌ಕಾರ್ಡ್ ಪಡೆಯಲು ಅರ್ಹರಾಗಿರುವ ಕುಟುಂಬಗಳನ್ನು ಗುರುತಿಸಿ, ಯೋಜನೆಯಡಿ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವಂತೆ ಪ್ರೇರೇಪಿಸಲಾಗುವುದು. ಗ್ರಾಮದಲ್ಲಿಯೇ ಉದ್ಯೋಗ ದೊರೆಯುವುದರಿಂದ ಗ್ರಾಮೀಣ ಜನರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರ್ಮಿಕರನ್ನು ಯೋಜನೆಯಡಿ ತೊಡಗಿಸಿಕೊಂಡು ನಿರಂತರ ಉದ್ಯೋಗ ಒದಗಿಸಲು ಆದ್ಯತೆ ನೀಡಲಾಗಿದೆ. ಈಗಾಗಲೇ ತಾಲೂಕಿನ ಎಲ್ಲ 27 ಗ್ರಾಮ ಪಂಚಾಯಿತಿಗಳಲ್ಲಿ ಜಾಬ್‌ಕಾರ್ಡ್ ಮೇಳ ಪ್ರಗತಿಯಲ್ಲಿದ್ದು, ಗ್ರಾಮೀಣ ಕುಟುಂಬಗಳಿಗೆ ಯೋಜನೆಯ ಕುರಿತು ಸಮಗ್ರ ಮಾಹಿತಿ ನೀಡಲು ವಿಶೇಷ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಕಾಯಕ ಮಿತ್ರರು, ಬಿಎಫ್‌ಟಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲಿದ್ದಾರೆ. ಉದ್ಯೋಗ ಬೇಡಿಕೆ ಸಂಗ್ರಹಿಸುವುದು ಹಾಗೂ ಯೋಜನೆಯಡಿ ಲಭ್ಯವಿರುವ ವಿವಿಧ ಕಾಮಗಾರಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಈ ಕಾರ್ಯದ ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮೇಲ್ವಿಚಾರಣೆ ನಡೆಸುವಂತೆ ಸೂಚಿಸಲಾಗಿದೆ ಎಂದು ಡಾ. ಜನಗಿ ತಿಳಿಸಿದ್ದಾರೆ.

ಗ್ರಾಮೀಣ ಕುಟುಂಬಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವುದರ ಜತೆಗೆ ಹೆಚ್ಚಿನ ಮಾನವ ದಿನಗಳನ್ನು ಸೃಜಿಸುವುದು ಜಾಬ್‌ಕಾರ್ಡ್ ಮೇಳದ ಪ್ರಮುಖ ಉದ್ದೇಶವಾಗಿದೆ. ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬ ಅರ್ಹ ಕೂಲಿಕಾರ್ಮಿಕರೂ ಪಡೆದುಕೊಳ್ಳುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಾಬ್‌ಕಾರ್ಡ್ ಹೊಂದಿರುವ ಹಾಗೂ ಇ-ಕೆವೈಸಿ ಪೂರ್ಣಗೊಳಿಸಿರುವ ಪ್ರತಿಯೊಬ್ಬ ಅರ್ಹ ಕೂಲಿಕಾರ್ಮಿಕರೂ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯಿತಿಗಳ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಿ, ಗ್ರಾಮೀಣ ಕುಟುಂಬಗಳಿಗೆ ಆದಾಯದ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

— ಡಾ. ಎಚ್.ಎಸ್. ಜನಗಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ಗದಗ

ಬರ ಪರಿಸ್ಥಿತಿಯಿಂದ ಗ್ರಾಮೀಣ ಭಾಗದಲ್ಲಿ ಕೃಷಿ ಕೆಲಸದ ಅವಕಾಶಗಳು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾಬ್‌ಕಾರ್ಡ್ ಮೇಳ ಮಹತ್ವ ಪಡೆದಿದೆ. ಗ್ರಾಮದಲ್ಲಿಯೇ ಕೂಲಿ ಕೆಲಸ ದೊರೆಯುವುದರಿಂದ ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿ ತಪ್ಪಲಿದೆ. ಜಾಬ್‌ಕಾರ್ಡ್ ಹೊಂದಿರುವವರು ಇ-ಕೆವೈಸಿ ಪೂರ್ಣಗೊಳಿಸಿ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗ್ರಾಮ ಪಂಚಾಯಿತಿ ಸ್ವಚ್ಛ ವಾಹಿನಿ ಪ್ರಚಾರ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

— ಕುಮಾರ ಪುಜಾರ, ಸಹಾಯಕ ನಿರ್ದೇಶಕರು, ವಿಬಿ ಜಿ ರಾಮ್ ಜಿ ಯೋಜನೆ, ತಾಲೂಕು ಪಂಚಾಯಿತಿ, ಗದಗ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img