ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಕಾಲೇಜಿನಲ್ಲಿ ವಿವಿಧ ಕಂಪನಿಗಳ ಉದ್ಯೋಗ ಸಂದರ್ಶನ ಮಾರ್ಗದರ್ಶಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾದ ಗುರುರಾಜ ದುರುಗಣ್ಣವರ ಆಗಮಿಸಿ ಮಾತನಾಡಿ, ವಿವಿಧ ಕಂಪನಿಗಳಲ್ಲಿ ಉದ್ಯೋಗಗಳ ಜಾಹಿರಾತುಗಳನ್ನು ಪ್ರಮುಖ ಪತ್ರಿಕೆಯಲ್ಲಿ ಗಮನಿಸಿ, ಕಂಪನಿಗೆ ಭೇಟಿ ನೀಡಿದಾಗ ಸಂದರ್ಶನಕಾರರು ಯಾವ ರೀತಿಯ ಪ್ರಶ್ನಾವಳಿಗಳನ್ನು ಕೇಳಬಹುದು ಎಂಬ ವಿಚಾರವಾಗಿ ಸವಿಸ್ತಾರವಾಗಿ ವಿವರಿಸಿದರು.
ಪ್ರಾಚಾರ್ಯ ಬಿ.ಎಸ್. ಹೀರೆಮಠ ಮಾತನಾಡಿ, ಮಹಾವಿದ್ಯಾಲಯದಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಈಗಾಗಲೇ ಉತ್ತಮ ಸ್ಥಾನಮಾನಗಳನ್ನು ಹೊಂದಿ ಭವಿಷ್ಯ ರೂಪಿಸಿಕೊಂಡಿದ್ದಾರೆ. ಸಂಪನ್ಮೂಲ ವ್ಯಕ್ತಿ ಗುರುರಾಜ ದುರುಗಣ್ಣವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಕ್ಕಾಗಿ ಸಂಸ್ಥೆಯ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರಲ್ಲದೆ, ಅವರು ಹೇಳಿಕೊಟ್ಟ ಮಾರ್ಗಸೂಚಿಯನ್ನು ವಿದ್ಯಾರ್ಥಿಗಳು ಪಾಲಿಸಿರಿ ಎಂದರು.
ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಸಂಸ್ಥೆಯ ನಿರ್ದೇಶಕರುಗಳಾದ ಸಂಜಯ ಕುಡತರಕರ, ಚೇತನ ಕುಡತರಕರ ಹಾಗೂ ಆಡಳಿತಾಧಿಕಾರಿಗಳಾದ ಕಿಶೋರ ಮುದಗಲ್ಲ, ಪ್ರೊ. ಸವಿತಾ ಪೂಜಾರ, ಪ್ರೊ. ಅಲ್ವೀನಾ ಡಿ, ಪ್ರೊ. ಚೈತ್ರಾ ಡಿ, ಪ್ರೊ. ಶಾಹೀದಾ ಶಿರಹಟ್ಟಿ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


