ಗದಗ:- ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ಸರ್ಕಾರದ ವ್ಯಾಪ್ತಿಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿಗಳನ್ನು ಆಫ್ಲೈನ್ ಮೂಲಕ ಫೆಬ್ರವರಿ 21ರೊಳಗಾಗಿ ಸಲ್ಲಿಸಬೇಕು. ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10ನೇ ತರಗತಿ ಪೂರ್ಣಗೊಳಿಸಿರಬೇಕು ಹಾಗೂ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಗದಿತ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ನೋಂದಾಯಿತ ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ನಿಗದಿತ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಕಳುಹಿಸಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಅಧಿಕೃತ ಲಿಂಕ್ ಅಥವಾ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು, ನಿಗದಿತ ಸರಿಯಾದ ಮಾಹಿತಿ ತುಂಬಿರಿ.
ಅಧಿಸೂಚನೆಯಲ್ಲಿ ಸೂಚಿಸಿದ್ದರೆ ಮಾತ್ರ ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ.
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನೋಂದಾಯಿತ ಅಂಚೆ (Registered Post) ಅಥವಾ ಸ್ಪೀಡ್ ಪೋಸ್ಟ್ ಮೂಲಕ ಮೇಲಿನ ವಿಳಾಸಕ್ಕೆ ಫೆಬ್ರವರಿ 21 ರ ಒಳಗಾಗಿ ತಲುಪಿಸಿ.
ಅರ್ಜಿ ಸಲ್ಲಿಸುವ ವಿಳಾಸ:
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು:
ಸದಸ್ಯ ಕಾರ್ಯದರ್ಶಿಗಳು,
ತಾಲೂಕು ಕಾನೂನು ಸೇವೆಗಳ ಸಮಿತಿ,
ನ್ಯಾಯಾಲಯ ಸಂಕೀರ್ಣ, ಲಕ್ಷ್ಮೇಶ್ವರ,
ಗದಗ ಜಿಲ್ಲೆ – 582116.



