ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆ ಭಾರತೀಯ ಜನತಾ ಪಾರ್ಟಿ ಎಸ್‌ಟಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜೋಗಿ ಹನುಮಂತಪ್ಪ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಈ ನೇಮಕಕ್ಕೆ ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಜೋಗಿ ಹನುಮಂತಪ್ಪ ಅವರು ಹಲವು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಅವರ ಸೇವಾ ಮನೋಭಾವ, ಸಂಘಟನಾ ಸಾಮರ್ಥ್ಯ ಹಾಗೂ ಕಾರ್ಯಕರ್ತರೊಂದಿಗೆ ಹೊಂದಿರುವ ಉತ್ತಮ ಬಾಂಧವ್ಯವನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿ ನೀಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ನನ್ನನ್ನು ಈ ಹುದ್ದೆಗೆ ಆಯ್ಕೆ ಮಾಡಿದ ರಾಜ್ಯ ನಾಯಕರು, ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ, ಸಹ ಪ್ರಭಾರಿ ಚನ್ನಬಸವನಗೌಡ ಪಾಟೀಲ್, ಮಂಡಲ ಅಧ್ಯಕ್ಷ ಬೆಣಕಲ್ ಪ್ರಕಾಶ್ ಹಾಗೂ ಜಿಲ್ಲೆಯ ಎಲ್ಲ ಪದಾಧಿಕಾರಿಗಳಿಗೆ, ಹಗರಿಬೊಮ್ಮನಹಳ್ಳಿ ಕ್ಷೇತ್ರದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಜೋಗಿ ಹನುಮಂತಪ್ಪ ತಿಳಿಸಿದ್ದಾರೆ.
“ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ ಎಸ್‌ಟಿ ಸಮುದಾಯದ ಅಭಿವೃದ್ಧಿ ಹಾಗೂ ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ. ಆಶೀರ್ವಾದ ಮಾಡಿದ ಹಗರಿಬೊಮ್ಮನಹಳ್ಳಿ ರಾಮನಗರ–ಕುರದಗಡ್ಡಿ ವಾರ್ಡ್‌ನ ಸಮಸ್ತ ಮತಬಾಂಧವರಿಗೆ ಕೃತಜ್ಞನಾಗಿದ್ದೇನೆ.”
ಜೋಗಿ ಹನುಮಂತಪ್ಪ, ಪುರಸಭೆ ಸದಸ್ಯರು



