ನವದೆಹಲಿ: ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಆರ್ ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು.
Advertisement
ಮಂಗಳವಾರ ನ್ಯಾ.ಸಂಜೀವ ಖನ್ನಾ ಅವರ ನಿವೃತ್ತಿ ಬಳಿಕ ಇಂದು ನ್ಯಾ.ಬಿ.ಆರ್ ಗವಾಯಿ ಅವರು ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಅಲಂಕರಿಸಿದ್ದಾರೆ. 52ನೇ ಮುಖ್ಯ ನ್ಯಾಯಮೂರ್ತಿಯಾಗಿರುವ ಬಿ.ಆರ್ ಗವಾಯಿ ಅವರು 6 ತಿಂಗಳಿಗೂ ಹೆಚ್ಚಿನ ಅವಧಿ ಅಧಿಕಾರದಲ್ಲಿರಲಿದ್ದು,
ಇದೇ ನ.23ರಂದು ನಿವೃತ್ತಿ ಹೊಂದಲಿದ್ದಾರೆ. ಜೊತೆಗೆ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ಏರಿದ ಮೊದಲ ಬೌದ್ಧ ಮತ್ತು ಪರಿಶಿಷ್ಟ ಜಾತಿಯಿಂದ ಆಯ್ಕೆಯಾದ ಎರಡನೇ ನ್ಯಾಯಾಧೀಶರಾದರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.