ಮಹಿಳೆಯರಿಗೆ ನ್ಯಾಯ ಸಂದಿದೆ: ಪ್ರಜ್ವಲ್ ರೇವಣ್ಣ ಕೇಸ್ ತೀರ್ಪು ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್

0
Spread the love

ಸ್ಯಾಂಡಲ್‌ ವುಡ್‌ ನಟಿ ರಮ್ಯಾ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಆಕ್ಟೀವ್‌ ಆಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ರೇಣುಕಾಸ್ವಾಮಿಗೆ ನ್ಯಾಯ ಸಿಗಲಿದೆ ಎಂದು ಬರೆದುಕೊಂಡಿದ್ದ ನಟಿ ಇದೀಗ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಕುರಿತು ಬಂದಿರುವ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ್ದಾರೆ.

Advertisement

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ನಾಳೆ (ಆಗಸ್ಟ್ 2) ಪ್ರಕಟಿಸಲಿದ್ದು, ಹಲವರು ಪ್ರಜ್ವಲ್ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಅಂತೆಯೇ ನಟಿ ರಮ್ಯಾ ಕೂಡ ಪ್ರತಿಕ್ರಿಯಿಸಿದ್ದು ಇದು ಮಹಿಳೆಯರಿಗೆ ದೊರೆತ ನ್ಯಾಯ ಎಂದಿದ್ದಾರೆ.

ಇನ್​ಸ್ಟಾಗ್ರಾಮ್ ಪೋಸ್ಟ್ ಹಾಕಿರುವ ನಟಿ ರಮ್ಯಾ, ಹಾಕಿದ್ದು, ಎಲ್ಲ ಮಹಿಳೆಯರಿಗೂ ನ್ಯಾಯ ಸಂದಿದೆ ಎಂದು ಬರೆದಿದ್ದಾರೆ. ವೆಲ್​ಡನ್ ಹೈಕೋರ್ಟ್ ಎಂದು ಬರೆದುಕೊಂಡಿದ್ದಾರೆ.

ನಟಿ ರಮ್ಯಾ ಅವರು ಕಳೆದ ಕೆಲ ದಿನಗಳಿಂದ ಸಖತ್‌ ಸುದ್ದಿಯಾಗುತ್ತಿದ್ದಾರೆ. ರೇಣುಕಾಸ್ವಾಮಿ ಸಾವಿನ ಕುರಿತು ಪ್ರತಿಕ್ರಿಯಿಸಿ ದರ್ಶನ್‌ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಹೀಗಾಗಿ ದರ್ಶನ್‌ ಅಭಿಮಾನಿಗಳು ಸೋಷಿಯಲ್‌ ಮೀಡಿಯಾದಲ್ಲಿ ರಮ್ಯಾ ಅವರಿಗೆ ಅಶ್ಲೀಲ ಕಮೆಂಟ್‌ ಹಾಕಿದ್ದರು. ಈ ಬಗ್ಗೆ ನಟಿ ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here