ಜ್ಯೋತಿ ಕಬಾಡಿಗೆ ‘ಕದಂಬ ಸೇವಾ ರತ್ನ’ ಪ್ರಶಸ್ತಿ

0
Oplus_131072
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್‌ನ ಅಧ್ಯಕ್ಷೆ ಜ್ಯೋತಿ ಉಜ್ಜಲ ಕಬಾಡಿ ಅವರಿಗೆ ಕದಂಬ ಕನ್ನಡ ಸೇನೆ ಕರ್ನಾಟಕ ವತಿಯಿಂದ ನೀಡಲಾಗುವ ‘ಕದಂಬ ಸೇವಾ ರತ್ನ’ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Advertisement

ಸಂಗೀತ, ಕಲೆ-ಸಂಸ್ಕೃತಿ ಪ್ರಚಾರ, ಸಮಾಜ ಸೇವೆ ಹಾಗೂ ಪ್ರತಿಭಾವೃದ್ಧಿಗೆ ನೀಡಿರುವ ಅಮೂಲ್ಯ ಕೊಡುಗೆಗಾಗಿ ಇವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಸಂಸ್ಕೃತಿಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಕದಂಬರ ನಾಡು ಬನವಾಸಿಯಲ್ಲಿ ಭವ್ಯವಾಗಿ ನೆರವೇರಿತು. ಈ ಸಂದರ್ಭದಲ್ಲಿ ಕದಂಬ ಕನ್ನಡ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ನಾ. ಅಂಬರೀಶ್, ರಾಜ್ಯಾಧ್ಯಕ್ಷ ಶಿವಕುಮಾರ್, ರಾಜ್ಯ ಸಂಚಾಲಕ ಗೈಬುಸಾಬ ಕಲೆಬಾಯಿ, ಉತ್ತರ ಕನ್ನಡ ಜಿಲ್ಲೆಯ ಅಧ್ಯಕ್ಷ ಸತೀಶ್ ನಾಯಕ್, ಗದಗ ಜಿಲ್ಲಾಧ್ಯಕ್ಷ ಈಶ್ವರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಸೌಮ್ಯ ಜೋಶ್ವ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here