ವಿಜಯಸಾಕ್ಷಿ ಸುದ್ದಿ, ಗದಗ: ಪ್ರಿಯದರ್ಶಿನಿ ಗ್ರಾಮೀಣಾಭಿವೃದ್ಧಿ ಫೌಂಡೇಶನ್ ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯ ನಾಮಕರಣದ 52ನೇ ವರ್ಷದ ಸುವರ್ಣ ವರ್ಷಾಚರಣೆ ಸಂದರ್ಭದಲ್ಲಿ, 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಹೆಮ್ಮೆಯ ಕನ್ನಡಿಗ ಮತ್ತು ಕನ್ನಡತಿ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.24ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.
ಸಮಾರಂಭದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಗಣ್ಯ ವ್ಯಕ್ತಿಗಳನ್ನು ಗೌರವಿಸಲಾಗುತ್ತದೆ. ಈ ಸಂದರ್ಭದಲ್ಲಿ ಗದಗ ಜಿಲ್ಲೆಯ ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಉಜ್ವಲ್ ಕಬಾಡಿ ಇವರಿಗೆ `ಹೆಮ್ಮೆಯ ಕನ್ನಡತಿ ರಾಷ್ಟ್ರ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.
ಸಂಸ್ಥೆಯ ಅಧ್ಯಕ್ಷೆ ಸುಮಾ ಎಸ್.ಕವಲ್ದಾರ್ ಕಲಬುರಗಿ, ಕಾರ್ಯದರ್ಶಿ ಸತೀಶ್ ಎನ್.ಜೆ ಬೆಂಗಳೂರು, ಖಜಾಂಚಿ ಅನಸೂಯ ವಿ ಬೆಂಗಳೂರು ಹಾಗೂ ಇತರರು ಈ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸುತ್ತಿದ್ದಾರೆ.


