ದಿಢೀರ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆ.ಅಣ್ಣಾಮಲೈ!

0
Spread the love

ಚೆನ್ನೈ:- ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ಅವರು ದಿಢೀರ್ ರಾಜೀನಾಮೆ ಘೋಷಣೆ ಮಾಡಿದ್ದಾರೆ.

Advertisement

ರಾಜೀನಾಮೆ ಕೊಟ್ಟ ಬಳಿಕ ಮಾತನಾಡಿದ ಕೆ.ಅಣ್ಣಾಮಲೈ, ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಹೇಳಿದ್ದಾರೆ.

ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು ಪಕ್ಷದ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ಇಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡಲ್ಲ.

ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದೆ. ಪ್ರತಿ ಪಕ್ಷಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ 50 ಜನ ನಾಮಪತ್ರ ಸಲ್ಲಿಸುತ್ತಾರೆ. ಆದ್ರೆ ನಮ್ಮಲ್ಲಿ ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಅಂತ ಅಣ್ಣಾಮಲೈ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here