ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ವಿಜಯ ಪದವಿಪೂರ್ವ ವಿದ್ಯಾರ್ಥಿನಿಯರಾದ ದೀಪಾ ಜಕ್ಕಲಿ 3000 ಮೀ ಓಟದಲ್ಲಿ ತೃತೀಯ ಸ್ಥಾನವನ್ನು ಹಾಗೂ ರಂಜಿತಾ ದಾವಣಗೇರಿ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
Advertisement
ಸಾಧಕ ವಿದ್ಯಾರ್ಥಿಗಳಿಗೆ ವಿಜಯ ಫೈನ್ ಆರ್ಟ್ ಸಂಸ್ಥೆಯ ಅಧ್ಯಕ್ಷರಾದ ಅಶೋಕ ಟಿ.ಅಕ್ಕಿ, ಕಾರ್ಯದರ್ಶಿ ಸಂತೋಷ ಅಕ್ಕಿ, ಮುಖ್ಯಸ್ಥರಾದ ಸಾಗರಿಕ ಅಕ್ಕಿ, ಪ್ರಾಚಾರ್ಯರಾದ ಶ್ರೀದೇವಿ ಯರಗಂಬಳಿಮಠ ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.