ವಿಜಯಸಾಕ್ಷಿ ಸುದ್ದಿ, ಗದಗ: ಸಹಕಾರಿ ರಂಗದ ಭೀಷ್ಮರೆಂದೇ ಹೆಸರಾಗಿರುವ ದಿ. ಕೆ.ಎಚ್. ಪಾಟೀಲರ ಜನ್ಮಶತಮಾನೋತ್ಸವ ಹಾಗೂ ಕಾಟನ್ ಸೇಲ್ ಸೊಸೈಟಿ ನೂತನ ಕಟ್ಟಡದ ಲೋಕಾರ್ಪಣೆ ಸಮಾರಂಭ ಮಾ. 16ರಂದು ನಡೆಯಲಿದೆ.
Advertisement
ಕೆ.ಎಚ್. ಪಾಟೀಲ ಪ್ರತಿಷ್ಠಾನದ ವತಿಯಿಂದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ 10 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಕಾರ್ಯಕ್ರಮಕ್ಕೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಅರಣ್ಯ ಸಚಿವ ಈಶ್ವರ ಖಂಡ್ರೆ, ಕಾನೂನು ಸಚಿವ ಎಚ್.ಕೆ. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.