ವಿಜಯಸಾಕ್ಷಿ ಸುದ್ದಿ, ಗದಗ: ನಗರದ ದಿ. ಕೆ.ಎಚ್. ಪಾಟೀಲ ವೃತ್ತದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಅವರ ಪುಣ್ಯತಿಥಿಯನ್ನು ಸೋಮವಾರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಅಕ್ಬರಸಾಬ ಬಬರ್ಚಿ, ಜಿ.ಪಂ ಮಾಜಿ ಅಧ್ಯಕ್ಷೆ ಸುಜಾತಾ ದೊಡ್ಡಮನಿ, ನಗರಸಭೆ ಮಾಜಿ ಅಧ್ಯಕ್ಷೆ ರುದ್ರಮ್ಮ ಕೆರಕಲಮಟ್ಟಿ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ಕಡೆಮನಿ, ತಾ.ಪಂ ಮಾಜಿ ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಉಮರಫಾರೂಖ್ ಹುಬ್ಬಳ್ಳಿ, ಗದಗ ಜಿಲ್ಲಾ ಕೆಡಿಪಿ ಸಮಿತಿ ಸಭೆಯ ಸದಸ್ಯರಾದ ಎಸ್.ಎನ್. ಬಳ್ಳಾರಿ, ಮುಖಂಡರಾದ ವೀಣಾ ಕಟ್ನಳ್ಳಿ, ಶಾರೂಖ್ ಹುಯಿಲಗೋಳ, ಶಹಬಾಜ್ ಮುಲ್ಲಾ, ಶಂಭು ಕಾಳೆ, ಮಹಮ್ಮದ್ ಶಾಲಗಾರ, ಸರ್ಫರಾಜ್ ಬಬರ್ಚಿ, ವಿನಾಯಕ ಬಳ್ಳಾರಿ, ಸೈಯದ್ಖಾಲಿದ ಕೊಪ್ಪಳ, ಅನ್ವರ ನದಾಫ್, ಮಹಾಂತೇಶ ಮಡಿವಾಳರ, ಪರಪ್ಪ ಕಮತರ, ಕಮಲಾಕ್ಷಿ ಹಾದಿಮನಿ, ಯಲ್ಲಮ್ಮ ಜಡಿ, ದ್ರಾಕ್ಷಾಯಣಿ ಹಾಸಿಲ್ಕರ್, ಪೂಜಾ ಬೇವೂರ, ಮರಿಯಪ್ಪ ಸಣ್ಣತಂಗಿಯವರ, ಮಹೇಶ ಪಟ್ಟಣಶೆಟ್ಟಿ, ಜಾಕೀರ ಕುನ್ನಿಬಾವಿ, ಪರಮೇಶಪ್ಪ ಜಂತ್ಲಿ, ಕರಬಸಯ್ಯ ನಾಲ್ವಾಡಮಠ, ಮಲಿಕ್ ಸಂಗಾಪೂರ, ಉಮರ್ಫಾರೂಖ್ ಬಾರಿಗಿಡದ, ಅಭಿಷೇಕ, ಶಿವು ಹಾದಿಮನಿ, ಸಂತೋಷ ರಾಮೇನಹಳ್ಳಿ, ಮಹಮ್ಮದ್ ಬೆಟಗೇರಿ, ಅಜ್ಜಪ್ಪ ವಗ್ಗನ್ನವರ, ವಿರುಪಾಕ್ಷ ನಂದೆಣ್ಣವರ, ಅಹ್ಮದ್ ಖಾಜಿ, ಹುಸೇನ್ ಓಲೇಕಾರ, ಅನ್ವರ ಶಿರಹಟ್ಟಿ, ಕಾಂಗ್ರೆಸ್ ಮುಖಂಡರು, ಕೆ.ಎಚ್. ಪಾಟೀಲ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಕೆ.ಎಚ್. ಪಾಟೀಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಕೆ.ಎಚ್. ಪಾಟೀಲರು ರೈತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಹಲವು ಖಾತೆಗಳನ್ನು ನಿಭಾಯಿಸಿದ್ದ ಅವರು, ನೇರ ಹಾಗೂ ನಿಷ್ಠುರತೆಯಿಂದ ಗುರುತಿಸಿಕೊಂಡಿದ್ದರು. ಪ್ರತಿಯೊಬ್ಬರೂ ಕೆ.ಎಚ್. ಪಾಟೀಲರ ಆದರ್ಶವನ್ನು ಅಳವಡಿಸಿಕೊಂಡು ಮುನ್ನಡೆದರೆ ಯಶಸ್ವಿ ಹಾಗೂ ಮಾದರಿ ರಾಜಕಾರಣಿಯಾಗಲು ಸಾಧ್ಯ ಎಂದರು.



