ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೇ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜಣ್ಣ ಸತ್ಯ ಹೇಳಿದ್ದಾರೆ, ಅದಕ್ಕೆ ಅವರ ರಾಜೀನಾಮೆ ಕೇಳಿದ್ದಾರೆ. ಸಿದ್ದರಾಮಯ್ಯ ಕಡೆಯ ಒಂದೊಂದೇ ವಿಕೆಟ್ ಬೀಳ್ತಿದೆ. ಡಿಕೆ ಬಲಾಢ್ಯ ಆಗ್ತಿದ್ದಾರೆ. ಕಾಂಗ್ರೆಸ್ ನಾಯಕರು ರಾಮಣ್ಣ ರಾಜೀನಾಮೆಗೆ ತಿಳಿಸಿದ್ದಾರೆ, ಯಾಕೆ? ಪಕ್ಷದಲ್ಲಿ ಪ್ರಜಾಪ್ರಭುತ್ವ ಇದೆ ಅಂತಾರಲ್ಲ ಎಲ್ಲಿದೆ ಅವರ ಪಕ್ಷದಲ್ಲಿ? ಅಂತ ಪ್ರಶ್ನೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಮೊದಲ ವಿಕೆಟ್ ಪತನವಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಹೈಕಮಾಂಡ್ ಸೂಚನೆ ಮೇರೆಗೆ ರಾಜೀನಾಮೆ ನೀಡಿದ್ದಾರೆ. ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಸೃಷ್ಟಿಯಾಗಿದೆ.