ಬೆಂಗಳೂರು: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರ ಸಂಬಂಧಿತ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಬಂಧಿಸಲಾಗಿದೆ.
ಇನ್ಸ್‌ಪೆಕ್ಟರ್ ಗೋವಿಂದರಾಜು ₹4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಅದೇ ಮೊತ್ತವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಸಿರಸಿ ಸರ್ಕಲ್ ಬಳಿಯ ಕಾರ್ ಗ್ರೌಂಡ್ ಬಳಿ ಈ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಸದ್ಯ ಇನ್ಸ್‌ಪೆಕ್ಟರ್ ಗೋವಿಂದರಾಜುರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.



