ಬೆಂಗಳೂರು:- ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ್ ಲೇಔಟ್‌ನಲ್ಲಿ ಇಂದು ಸಂಜೆ ಸುಮಾರು 7 ಗಂಟೆ ವೇಳೆಗೆ ಸಿಲಿಂಡರ್ ಬ್ಲಾಸ್ಟ್‌ನಿಂದಾಗಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಈ ಘಟನೆಯಲ್ಲಿ ಪೂರ್ಣಿಮ (46) ಹಾಗೂ ವೆಂಕಟೇಶ್ (40) ಗಾಯಗೊಂಡಿದ್ದು, ಪೂರ್ಣಿಮ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಿಲಿಂಡರ್ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಸ್ಥಳದಲ್ಲಿ ಆತಂಕ ಉಂಟಾಯಿತು. ಮಾಹಿತಿ ಪಡೆದ ಅಗ್ನಿಶಾಮಕ ದಳ ಹಾಗೂ ಕೆ.ಆರ್.ಪುರಂ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ.
ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



