HomeKarnataka Newsಕಬಡ್ಡಿ ವೇಳೆ ಕಿರಿಕ್: ಅಪ್ರಾಪ್ತ ವಿದ್ಯಾರ್ಥಿಗೆ ಮಚ್ಚಿನಿಂದ ಹಲ್ಲೆ!

ಕಬಡ್ಡಿ ವೇಳೆ ಕಿರಿಕ್: ಅಪ್ರಾಪ್ತ ವಿದ್ಯಾರ್ಥಿಗೆ ಮಚ್ಚಿನಿಂದ ಹಲ್ಲೆ!

For Dai;y Updates Join Our whatsapp Group

Spread the love

ಹಾಸನ:– ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯದ ವೇಳೆ ಪಿಯು ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿ ವಿದ್ಯಾರ್ಥಿಗಳು ಪರಸ್ಪರ ಬಡಿದಾಡಿಕೊಂಡು ಮಚ್ಚು ಬೀಸಿರುವ ಘಟನೆ ಜರುಗಿದೆ.

ಆ.30 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಪಿಯುಸಿ ಕಾಲೇಜುಗಳ ಕ್ರೀಡಾಕೂಟದಲ್ಲಿ ಕಬಡ್ಡಿ ಪಂದ್ಯ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಎರಡು ಕಾಲೇಜು ವಿದ್ಯಾರ್ಥಿಗಳ ಗುಂಪಿನ ನಡುವೆ ಜಗಳ ಶುರುವಾಗಿದೆ.

ಈ ವೇಳೆ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಮತ್ತೋರ್ವ ಅಪ್ರಾಪ್ತ ವಿದ್ಯಾರ್ಥಿ ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದ ಮಚ್ಚು ತೆಗೆದು ಹಲ್ಲೆಗೆ ಮುಂದಾಗಿದ್ದು, ಕೂದಲೆಳೆ ಅಂತರದಲ್ಲಿ ಅಪ್ರಾಪ್ತ ವಿದ್ಯಾರ್ಥಿ ಪಾರಾಗಿದ್ದಾನೆ.

ಇದರಿಂದ ಸಿಟ್ಟಿಗೆದ್ದ ಇತರೇ ವಿದ್ಯಾರ್ಥಿಗಳು ಮಚ್ಚು ಬೀಸಿದವನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹೊಡೆತ ತಾಳಲಾರದೇ ಅಪ್ರಾಪ್ತ ವಿದ್ಯಾರ್ಥಿ ನೆಲಕ್ಕುರಿಳಿದ್ದಾನೆ ಆದರೂ ಬಿಡದೇ ವಿದ್ಯಾರ್ಥಿಗಳು ಕಾಲಿನಿಂದ ಒದ್ದು ಮನಸ್ಸೋ ಇಚ್ಛೆ ಗೂಸಾ ಕೊಟ್ಟಿದ್ದಾರೆ. ಗಾಯಾಳು ವಿದ್ಯಾರ್ಥಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!