ವಿಜಯಸಾಕ್ಷಿ ಸುದ್ದಿ, ಗದಗ: ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್‌ನ ಅಧ್ಯಕ್ಷೆ ಜ್ಯೋತಿ ಉಜ್ವಲ ಕಬಾಡಿ ಕದಂಬ ಸೇವಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನವೆಂಬರ್ 10ರಂದು ಮಧ್ಯಾಹ್ನ 3 ಗಂಟೆಗೆ, ಬನವಾಸಿಯ ಮಧುಕೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ, ಮುಖ್ಯ ಪ್ರಶಸ್ತಿಯಾದ ರಾಜರತ್ನ ಮಯೂರವರ್ಮ ಪ್ರಶಸ್ತಿ’ಯನ್ನು ಮೈಸೂರು ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಪ್ರದಾನ ಮಾಡಲಾಗುತ್ತದೆ.
ಇದೇ ಸಂದರ್ಭದಲ್ಲಿ, ಕದಂಬ ಸೇವಾ ರತ್ನ ಪ್ರಶಸ್ತಿಯನ್ನು ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್‌ನ ಅಧ್ಯಕ್ಷೆ ಜ್ಯೋತಿ ಉಜ್ವಲ ಕಬಾಡಿ ಅವರು ಸ್ವೀಕರಿಸಲಿದ್ದಾರೆ. ಇವರ ಸಾಧನೆಗೆ ಕುಟುಂಬ ವರ್ಗದವರು, ಸ್ನೇಹಿತರು, ಬಂಧು-ಬಳಗ, ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಕದಂಬ ಕನ್ನಡ ಸೈನ್ಯದ ರಾಜ್ಯ ಸಂಚಾಲಕ ಗೈಬು ಡಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



