ಶಿವಮೊಗ್ಗ:ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ನಿನ್ನೆ ಭದ್ರಾವತಿಯ ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರಿಗೆ ಕೆಟ್ಟ ಪದಗಳನ್ನು ಬಳಸಿ ಬೈದಾಡಿರುವ ಘಟನೆ ಅಕ್ರಮ ಮರಳು ಗಣಿಗಾರಿಕೆ ಜಾಗದ ಮೇಲೆ ತಡರಾತ್ರಿ ರೇಡ್ ನಡೆಸಿದ ವೇಳೆ ನಡೆದಿದೆ.
ಅಶ್ಲೀಲ ಪದ ಬಳಸಿ ರೌಡಿಸಂ ಮಾತುಗಳಲ್ಲಿ ಮಹಿಳಾ ಅಧಿಕಾರಿಗೆ ಬೈದಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಅಧಿಕಾರಿಗೆ ಅಶ್ಲೀಲ ಪದಗಳಲ್ಲಿ ಶಾಸಕರ ಪುತ್ರ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ.
ಈ ಮಹಿಳಾ ಅಧಿಕಾರಿಯು ಭದ್ರಾವತಿ ಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಶಾಸಕ ಬಿಕೆ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ದೂರವಾಣಿ ಕರೆಯಲ್ಲಿ ಬೇ*****ಮು****, ನಿಮ್ಮ***** ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮಹಿಳಾ ಅಧಿಕಾರಿಯ ಮೇಲೆ ಎಂಎಲ್‌ಎ ಮಗನ ದರ್ಪದ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.